ಬೆಂಗಳೂರು: ಕೊರೋನ ನಿಯಂತ್ರಣಕ್ಕೆ ಲಾಕ್ ಡೌನ್ ಘೋಷಿಸಿರುವುದರಿಂದ ಬಡವರು ಸಂಕಷ್ಟಕ್ಕೆ ಸಿಲುಕಿರುವುದರಿಂದ 1250 ಕೋಟಿ ರೂ. ವಿಶೇಷ ಪ್ಯಾಕೇಜ್ ಅನ್ನು ಸಿಎಂ ಯಡಿಯೂರಪ್ಪ ಅವರು ಘೋಷಿಸಿದ್ದಾರೆ.
ಸಚಿವರು ಮತ್ತು ಅಧಿಕಾರಿಗಳ ಜೊತೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯ ಬಳಿಕ ಮಾತನಾಡಿ, ಲಾಕ್ ಡೌನ್ ವಿಸ್ತರಣೆ ಬಗ್ಗೆ ಮೇ 23ರಂದು ತೀರ್ಮಾನಿಸುತ್ತೇವೆ ಎಂದು ತಿಳಿಸಿದರು.
ನೋಂದಾಯಿತ ಕಟ್ಟದ ಕಾರ್ಮಿಕರಿಗೆ 3 ಸಾವಿರ ರೂ, ಅಸಂಘಟಿತ ಕಾರ್ಮಿಕರಿಗೆ 2 ಸಾವಿರ ರೂ., ರಸ್ತೆ ಬದಿ ವ್ಯಾಪಾರಿಗಳಿಗೆ 2 ಸಾವಿರ ರೂ,. ಕಲಾವಿದರಿಗೆ ತಲಾ 3 ಸಾವಿರ ರೂ., ಬಿಪಿಎಲ್ ಅಂತ್ಯೋದಯ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ನೀಡಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು. ಹೂವು ಬೆಲೆಗಾರರಿಗೆ ಪ್ರತಿ ಎಕ್ಟೇರ್ ಹಾನಿಗೆ 10 ಸಾವಿರ. ರೂ., ತರಕಾರಿ ಬೆಳೆಗಾರಿಗೆ ಪ್ರತಿ ಎಕ್ಟೇರ್ ಗೆ 10 ಸಾವಿರ ರೂ, ಅಟೋ, ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ 3 ಸಾವಿರ ರೂ. ನೀಡಲಾಗುವುದು ಎಂದು ತಿಳಿಸಿದರು.