Saturday, April 20, 2024

ತಾ.ಪಂ. ಸದಸ್ಯನಿಗೆ ಲಾಠಿಯಿಂದ ಹೊಡೆದ ಆರೋಪ; ಕಲ್ಲಡ್ಕದಲ್ಲಿ ಪೊಲೀಸರ ವಿರುದ್ಧ ನಾಗರಿಕರ ಆಕ್ರೋಶ

ಬಂಟ್ವಾಳ: ತಾಲೂಕು ಪಂಚಾಯತ್ ಸದಸ್ಯರೊಬ್ಬರಿಗೆ ಎಎಸ್ಸೈ ಒಬ್ಬರು ಲಾಠಿಯಿಂದ ಹೊಡೆದ ಕಾರಣಕ್ಕಾಗಿ ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಕೆಲವು ಹೊತ್ತು ವಾಗ್ವಾದ ನಡೆದ ಘಟನೆ ಶುಕ್ರವಾರ ಬೆಳಗ್ಗೆ ಕಲ್ಲಡ್ಕದಲ್ಲಿ ನಡೆದಿದೆ.

ಲಾಕ್ ಡೌನ್ ನಿಯಮಾವಳಿಯಂತೆ ಬೆಳಗ್ಗೆ 9 ಗಂಟೆಯ ಬಳಿಕ ಕಲ್ಲಡ್ಕದಲ್ಲಿ ಅಂಗಡಿಗಳನ್ನು ಮುಚ್ಚುವಂತೆ ಪೋಲೀಸರು ಸೂಚಿಸುತ್ತಿದ್ದರು. ಈ ವೇಳೆ ಕಾರು ನಿಲ್ಲಿಸಿ ಮೆಡಿಕಲ್ ಶಾಪ್ ಗೆ ಬರುತ್ತಿದ್ದ ಸ್ಥಳೀಯ ತಾಲೂಕು ಪಂಚಾಯತ್ ಸದಸ್ಯಗೆ ಬಂಟ್ವಾಳ ನಗರ ಠಾಣೆಯ ಎಎಸ್ಸೈ ಒಬ್ಬರು ಲಾಠಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ.

ಅಗತ್ಯ ಸಾಮಗ್ರಿಗಳ ಖರೀದಿಗೆ ಬಂದವರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ ಎಂದು ತಾಲೂಕು ಪಂಚಾಯತ್ ಸದಸ್ಯ ಹಾಗೂ ಸ್ಥಳೀಯ ನಾಗರಿಕರು ಪೊಲೀಸರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಸಾರ್ವಜನಿಕರು ಮತ್ತು ಪೊಲೀಸರ ನಡುವೆ ಕೆಲವು ಹೊತ್ತು ವಾಗ್ವಾದ ನಡೆಯಿತು.

ಬಳಿಕ ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣಾ ಎಸ್ಸೈ ಅವಿನಾಶ್ ಬಂದು ಘಟನೆಯನ್ನು ತಿಳಿಗೊಳಿಸಿದರು.

More from the blog

ವಿಟ್ಲ ವ್ಯಾಪ್ತಿಯ ಪ್ರಮುಖ ಧಾರ್ಮಿಕ ಕೇಂದ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಭೇಟಿ

ವಿಟ್ಲ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರು ಶನಿವಾರ ವಿಟ್ಲದ ವಿವಿಧ ಕಡೆಗಳಿಗೆ ಭೇಟಿ ನೀಡಿದರು. ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಕ್ಕೆ ಭೇಟಿ ನೀಡಿದ ಲೋಕಸಭಾ ಚುನಾವಣೆಯ ಕಾಂಗ್ರೆಸ್...

ಸೈಕಲ್ ರಿಪೇರಿಗೆ ಹಟ : ಬಾಲಕ ಆತ್ಮಹತ್ಯೆ

ಉಪ್ಪಿನಂಗಡಿ: ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ. ಮೂಲತಃ ಪಂಜದ ಅಳ್ಪೆಬನದ ನಿವಾಸಿ. ದಿ. ರೋಹಿತ್ ಮತ್ತು ರಮ್ಯ ದಂಪತಿಗಳ ಪುತ್ರ ಖಾಸಗಿ ಶಾಲೆಯ 8ನೇ ತರಗತಿಯ...

ಆಸ್ಪತ್ರೆಯಿಂದ ಆಂಬ್ಯುಲೆನ್ಸ್ ನಲ್ಲಿ ತೆರಳಿ ಸಿಇಟಿ ಪರೀಕ್ಷೆ ಬರೆದ ಆ್ಯಸಿಡ್ ದಾಳಿ ಸಂತ್ರಸ್ಥೆ ವಿದ್ಯಾರ್ಥಿನಿ

ಕಡಬ: ಆ್ಯಸಿಡ್ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಡಬದ ಸರ್ಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆಂಬ್ಯುಲೆನ್ಸ್ ಮೂಲಕ ತೆರಳಿ ಸಿಇಟಿ ಪರೀಕ್ಷೆ ಬರೆದಿದ್ದಾರೆ. ಮಾರ್ಚ್ 4ರಂದು ಕಾಲೇಜಿನಲ್ಲಿ ಪರೀಕ್ಷೆಗೆ ತಯಾರಾಗುತ್ತಿದ್ದ ವೇಳೆ ಅಬಿನ್...

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

ದಕ್ಷಿಣ ಕನ್ನಡ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಭೇಟಿ ನೀಡಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ...