ಮಂಗಳೂರು: ಬೈಕಂಪಾಡಿಯಲ್ಲಿನ ಆಕ್ಸಿಜನ್ ಉತ್ಪಾದನಾ ಘಟಕಕ್ಕೆ ದ.ಕ. ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಡಾ. ಭರತ್ ಕುಮಾರ್ ವೈ , ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಂಬಂಧಿಸಿದವರಿಂದ ಮಾಹಿತಿ ಪಡೆದುಕೊಂಡರು.
ಜಿಲ್ಲೆಯ ಪ್ರತಿ ಆಸ್ಪತ್ರೆಗಳಿಗೆ ಜಿಲ್ಲಾಡಳಿತದ ಮೂಲಕ ಈ ಆಕ್ಸಿಜನ್ ಸರಬರಾಜು ಮಾಡಲಾಗುತ್ತದೆ. ಕೊರೊನಾ ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿ ಇಲ್ಲಿ ತಯಾರಾಗುವ ಆಕ್ಸಿಜನ್ ಕೇವಲ ಆಸ್ಪತ್ರೆಗಳಿಗೆ ಮಾತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ. ಆಕ್ಸಿಜನ್ ಕೊರತೆಯಾಗದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕೋಟ ಶ್ರೀನಿವಾಸ ಪೂಜಾರಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.