ಮೇ.14: ಅಕ್ಷಯ ತೃತೀಯ ದಿನದಂದೇ ರೈತರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಿಹಿಸುದ್ದಿ ನೀಡಿದ್ದು, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಕಂತನ್ನು ಬಿಡುಗಡೆ ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಣ ಬಿಡುಗಡೆ ಮಾಡಿದ್ದಾರೆ.
8ನೇ ಕಂತಿನಲ್ಲಿ 20 ಸಾವಿರ ಕೋಟಿಗೂ ಅಧಿಕ ಹಣವನ್ನು ಬಿಡುಗಡೆ ಮಾಡಿದ್ದು, 9.5 ಕೋಟಿಗಿಂತ ಹೆಚ್ಚು ಫಲಾನುಭವಿಗಳ ಖಾತೆಗೆ ಜಮೆಯಾಗಲಿದೆ. ಈ ಮೂಲಕ 2021-22ರ ಆರ್ಥಿಕ ವರ್ಷದ ಪಿಎಂ ಕಿಸಾನ್ ಯೋಜನೆಯ ಮೊದಲ ಕಂತು ರೈತರಿಗೆ ಸೇರಿದೆ.
ಈ ಯೋಜನೆಯಡಿ ಅರ್ಹ ಫಲಾಅನುಭವಿ ರೈತರ ಕುಟುಂಗಳಿಗೆ ವರ್ಷಕ್ಕೆ 6000 ರೂ. ಸಿಗಲಿದ್ದು, ನಾಲ್ಕು ತಿಂಗಳಿಗೊಮ್ಮೆ ತಲಾ 2 ಸಾವಿರ ರೂ. ವರ್ಗಾವಣೆ ಆಗಲಿದೆ. ಈ ಯೋಜನೆಯಡಿ ಈವರೆಗೆ 1.15 ಲಕ್ಷ ಕೋಟಿ ಬಿಡುಗಡೆ ಮಾಡಲಾಗಿದೆ.
ಈ ಯೋಜನೆಯು 2019ರ ಡಿಸೆಂಬರ್‌ನಿಂದ ಜಾರಿಗೆ ಬಂದಿದ್ದು, ಈ ಯೋಜನೆಯಿಂದ ಸರ್ಕಾರಕ್ಕೆ ವರ್ಷಕ್ಕೆ 75 ಸಾವಿರ ಕೋಟಿ ರೂ. ವೆಚ್ಚವಾಗಲಿದೆ.