ರಾಜ್ಯದಲ್ಲಿ ಮೇ.24ರಿಂದ ಜೂನ್ 7ರವರೆಗೆ ವಿಸ್ತರಣೆಗೊಂಡಿರುವಂತ ಸಂಪೂರ್ಣ ಲಾಕ್ ಡೌನ್ ಸಂದರ್ಭದಲ್ಲಿ ಯಾವುದಕ್ಕೆ ಅನುಮತಿ.? ಯಾವುದಕ್ಕೆ ಇಲ್ಲ.? ಇಲ್ಲಿದೆ ಸಂಪೂರ್ಣ ಮಾಹಿತಿ.
ಯಾವುದಕ್ಕೆ ಅನುಮತಿ
- ಕೋವಿಡ್ ಸುರಕ್ಷಾ ನಿಯಮಗಳೊಂದಿಗೆ ಎಲ್ಲಾ ಬಗೆಯ ನಿರ್ಮಾಣ, ದುರಸ್ತಿ ಚಟುವಟಿಕೆಗಳಿಗೆ ಅನುಮತಿ
- ಮುಂಗಾರು ಪೂರ್ವ ಕೃಷಿ ಚಟುವಟಿಕೆಗಳಿಗೂ ಯಾವುದೇ ನಿರ್ಬಂಧವಿಲ್ಲ
- ಎಲ್ಲಾ ಬಗೆಯ ಕೈಗಾರಿಕೆಗಳು, ಸಂಸ್ಥೆಗಳು, ಉತ್ಪಾದನಾ ಘಟಕಗಳು ಕಾರ್ಯನಿರ್ವಹಿಸಬಹುದು
- ಸಿಬ್ಬಂದಿ ಓಡಾಟಕ್ಕೆ ಸಂಸ್ಥೆಗಳಿಂದ ಪಡೆದುಕೊಂಡ ಐಡಿ ಕಾರ್ಡ್ ತೋರಿಸುವುದು ಕಡ್ಡಾಯ
- ಪಡಿತರ ಅಂಗಡಿ ಹಾಗೂ ದಿನಸಿ, ಹಣ್ಣು ತರಕಾರಿ, ಹಾಲಿನ ಬೂತ್, ಮೀನು-ಮಾಂಸ, ಪಶು ಆಹಾರ ಅಂಗಡಿಗಳ ಸೇವೆ ಅಭಾಧಿತ
- ತರಕಾರಿ, ಹಣ್ಣು ಮಾರಾಟಕ್ಕೆ ಅನುಮತಿ.
- ಬ್ಯಾಂಕ್, ವಿಮಾ ಕಚೇರಿ, ಎಟಿಎಂ, ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮ, ಷೇರು ವಿನಿಮಯ ಸೇವಾ ಕೇಂದ್ರಗಳಿಗೆ ಅವಕಾಶ
- ಮದುವೆ ಸಮಾರಂಭಗಳಿಗೆ ಕೇವಲ 50 ಜನರಿಕೆ ಅವಕಾಶ
- ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಅವಕಾಶ
- ಸಂಚಾರ ಹಾಗೂ ಸರಕು ಸಾಗಾಣಿಕೆ ಮುಕ್ತ ಅವಕಾಶ. ಯಾವುದೇ ಪೂರ್ವಾನುಮತಿ ಬೇಕಿಲ್ಲ
- ಮಸೀದಿ, ಚರ್ಚ್ ಗಳಲ್ಲಿ ಪ್ರಾರ್ಥನೆಗೆ ಅವಕಾಶ
- ಪಾರ್ಸಲ್ ತೆಗೆದುಕೊಂಡು ಹೋಗೋದಕ್ಕೆ ಅವಕಾಶ. ಆದ್ರೇ ವಾಹನದಲ್ಲಿ ತೆರಳುವಂತಿಲ್ಲ. ಕಾಲ್ನಡಿಗೆಯಲ್ಲಿ ತೆರಳಬೇಕು
- ಇ-ಕಾಮರ್ಸ್ ಚಟುವಟಿಕೆಗೆ ಅವಕಾಶ
- ಅನುಮತಿ ನೀಡಿದ ಕೈಗಾರಿಕೆಗಳು ತೆರಯಲು ಅವಕಾಶ
- ವೈದ್ಯಕೀಯ ಉತ್ಪಾದನಾ ಕೈಗಾರಿಕೆ ತೆರೆಯಲು ಅವಕಾಶ
- ಅಗತ್ಯ ವಸ್ತು ಉತ್ಪಾದನಾ ಕೈಗಾರಿಕೆಗಳಿಗೆ ಅನುಮತಿ
ಯಾವುದಕ್ಕೆ ನಿರ್ಬಂಧ
- ಶಾಲೆ ಕಾಲೇಜು, ಕೋಚಿಂಗ್ ಸೆಂಟರ್, ತರಬೇತಿ ಕೇಂದ್ರ ಬಂದ್
- ಚಿತ್ರಮಂದಿರ, ಶಾಪಿಂಗ್ ಮಾಲ್, ಜಿಮ್, ಸ್ಪಾ, ಈಜುಕೊಳ, ಕ್ರೀಡಾ ಸಂಕೀರ್ಣ, ಅಮ್ಯಾಸ್ ಮೆಂಟ್ ಪಾರ್ಕ್, ಸಭಾಂಗಣ, ಅಸೆಂಬ್ಲಿ ಹಾಲ್ ಬಂದ್
- ಎಲ್ಲ ಬಗೆಯ ಧಾರ್ಮಿಕ ಸ್ಥಳಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ. ಆದ್ರೇ ದೈನಂದಿನ ಪೂಜಾ ಕೈಂಕರ್ಯಕ್ಕೆ ತಡೆ ಇಲ್ಲ
- ಹೋಟೆಲ್, ರೆಸ್ಟೋರೆಂಟ್, ಲಿಕ್ಕರ್ ಶಾಪ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಪಾರ್ಸೆಲ್ ಸೇವೆಗೆ ಮಾತ್ರ ಅವಕಾಶ
- ಸಾಮಾಜಿಕ, ರಾಜಕೀಯ, ಕ್ರೀಡೆ, ಮನೋರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಹಾಗೂ ಇತರ ಕಾರ್ಯಕ್ರಮಗಳಿಗೆ ನಿಷೇಧ
- ಅಗತ್ಯ ಸರಕುಗಳು ಮತ್ತು ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿಗಳನ್ನು ಮುಚ್ಚತಕ್ಕದ್ದು.
- ಅಂತರ್ ಜಿಲ್ಲಾ ಸಂಚಾರಕ್ಕೆ ಅವಕಾಶ ಇಲ್ಲ.