Friday, April 5, 2024

ನರಿಕೊಂಬು ಗ್ರಾ.ಪಂ. ಕೋವಿಡ್ ಟಾಸ್ಕ್ ಫೋರ್ಸ್ ಸಭೆ

ಬಂಟ್ವಾಳ: ನರಿಕೊಂಬು ಗ್ರಾಮದಲ್ಲಿ ಒಟ್ಟು 59 ಕೊರೋನ ಪ್ರಕರಣಗಳು ವರದಿಯಾಗಿದ್ದು,ಲ 26 ಆಕ್ಟೀವ್ ಕೇಸ್ ಗಳಿವೆ. 21 ಮಂದಿ ಹೋಂ ಐಸೋಲೇಶನ್ ನಲ್ಲಿದ್ದಾರೆ. ಕಾರ್ಯಪಡೆಯಲ್ಲಿ 56 ಮಂದಿ ಇದ್ದು ಎಲ್ಲರೂ ಉತ್ಸಾಹದಿಂದ ಕೆಲಸ ಮಾಡಿರಿ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ನರಿಕೊಂಬು ಗ್ರಾಮದಲ್ಲಿ ಟಾಸ್ಕ್ ಫೋರ್ಸ್ ಸಭೆಯಲ್ಲಿ ಗುರುವಾರ ಮಾತನಾಡಿದ ಅವರು, ಎಲ್ಲರೂ ಲಸಿಕೆ ಪಡೆಯುವುದರೊಂದಿಗೆ ಇತರರೂ ಲಸಿಕೆ ಹಾಕುವಂತೆ ಮನವಿ ಮಾಡಿದರು.

ಕೋವಿಡ್ ನಿಯಂತ್ರಣ ವಿಷಯದಲ್ಲಿ ಯಾವುದೇ ದಾಕ್ಷಿಣ್ಯ ಮಾಡಬೇಡಿ. ಹೊರಗಿನಿಂದ ಬಂದವರ ಮೇಲೆ ನಿಗಾ ಇರಿಸಿ. ಪಡಿತರ ವಿತರಣೆಗೆ 12 ಗಂಟೆವರೆಗೆ ತೆರಳಲು ಅವಕಾಶ ಇದೆ. ಹೋಂ ಐಸೋಲೇಶನ್ ಉಲ್ಲಂಘಿಸಿದವರಿಗೆ 112ಗೆ ಕರೆ ಮಾಡಿ ಎಂದು ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.

ಗ್ರಾಮದಲ್ಲಿ ಈಗಾಗಲೇ ನಾಲ್ಕು ಟಾಸ್ಕ್ ಫೋರ್ಸ್ ಮೀಟಿಂಗ್ ಆಗಿದೆ ಎಂದು ಮಾಹಿತಿಯನ್ನು ಪಿಡಿಒ ಶಿವಪ್ಪ ಜನಕೊಂಡ ಹೇಳಿದರು.

ತಾಪಂ ಇಒ ರಾಜಣ್ಣ, ಜಾಗೃತಿಯ ಕುರಿತು ಮಾಹಿತಿ ನೀಡಿದರು. ನರಿಕೊಂಬು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನುತಾ ಪುರುಷೋತ್ತಮ, ಉಪಾಧ್ಯಕ್ಷ ಪ್ರಕಾಶ್ ಮಡಿಮುಗೆರು, ತಹಶಿಲ್ದಾರ್ ರಶ್ಮಿ ಎಸ್.ಆರ್., ತಾ.ಪಂ. ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜಣ್ಣ, ಸಿ.ಡಿ.ಪಿ.ಒ. ಗಾಯತ್ರಿ ಕಂಬಳಿ, ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಪಿ.ಡಿ.ಒ. ಶಿವಪ್ಪ ಜನಗೊಂಡ, ಗ್ರಾಮ ಕರಣಿಕ ಅತೀಕ್ ಪೂಜಾರಿ, ಟಾಸ್ಕ್ ಫೋರ್ಸ್ ಸಮಿತಿ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...