Monday, April 8, 2024

ವಾಮದಪದವು ಕೋವಿಡ್ ಕೇರ್ ಸೆಂಟರ್ ಗೆ ಶಾಸಕ ರಾಜೇಶ್ ನಾಯ್ಕ್ ಭೇಟಿ; ಪರಿಶೀಲನೆ

ಬಂಟ್ವಾಳ: ವಾಮದಪದವಿನಲ್ಲಿರುವ ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಪ್ರಾರಂಭಿಸಲಿರುವ ಕೋವಿಡ್ ಕೇರ್ ಸೆಂಟರ್ ಹಾಗೂ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೋರೊನಾ ರೋಗಿಗಳಿಗಾಗಿ ಸಿದ್ಧಪಡಿಸಲಾದ ಆಕ್ಸಿಜನ್ ಸೌಕರ್ಯವನ್ನೊಳಗೊಂಡ ಬೆಡ್ ವ್ಯವಸ್ಥೆಯನ್ನು ಮೇ 3ರಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಪರಿಶೀಲನೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಕೊರೊನಾ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಮುಂಜಾಗ್ರತಾ ಕ್ರಮವಾಗಿ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತದೆ. ವಾಮದಪದವು ಸಮುದಾಯ ಆರೋಗ್ಯ ಕೇಂದ್ರದಲ್ಲಿ 12 ಬೆಡ್‌ಗಳನ್ನು ಆಕ್ಸಿಜನ್ ವ್ಯವಸ್ಥೆಯೊಂದಿಗೆ ಈಗಾಗಲೇ ಮೀಸಲಿಟ್ಟಿದ್ದೇವೆ. ತಾಲೂಕು ಆಸ್ಪತ್ರೆಯಲ್ಲಿನ 25 ಬೆಡ್‌ಗಳಿದ್ದು 14 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ಮಂದಿ ಐಸಿಯುನಲ್ಲಿದ್ದಾರೆ ಎಂದರು.

ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆದು ಆಸ್ಪತ್ರೆಯ ರೀತಿಯಲ್ಲೇ ಸಜ್ಜುಗೊಳಿಸಲಾಗುತ್ತಿದೆ. ಎ ಕೆಟಗರಿಯ ಗುಣಲಕ್ಷಣ ಇರುವವರಿಗೆ ಮನೆಯಲ್ಲಿ ವ್ಯವಸ್ಥೆ ಇಲ್ಲದೇ ಇದ್ದಾಗ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಹೀಗಾಗಿ ಯಾರೂ ಕೂಡ ಆತಂಕ ಪಡೆಬೇಕಿಲ್ಲ. ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ವಹಿಸುವುದು ಅತಿ ಅಗತ್ಯ ಎಂದರು.

ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರು ಜೊತೆಗಿದ್ದು, ವ್ಯವಸ್ಥೆಗಳ ಕುರಿತು ವಿವರಿಸಿದರು. ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ| ದೀಪಾ ಪ್ರಭು ಅವರು ಶಾಸಕರು ತಿಳಿಸಿದರು. ವಿದ್ಯಾರ್ಥಿ ನಿಲಯದಲ್ಲಿ ಪೂರಕ ವ್ಯವಸ್ಥೆಗಳನ್ನು ಮಾಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತರಣಾಧಿಕಾರಿ ಬಿಂದಿಯಾ ಅವರಿಗೆ ಸೂಚಿಸಿದರು.

ಆಸ್ಪತ್ರೆ ಹಾಗೂ ಕೇರ್ ಸೆಂಟರ್‌ಗೆ ಊಟದ ವ್ಯವಸ್ಥೆ, ಕೇರ್ ಸೆಂಟರ್‌ಗೆ ಹಾಸಿಗೆ, ಬೆಡ್ ಶೀಟ್ ವ್ಯವಸ್ಥೆಗಳ ಕುರಿತು ಅಧಿಕಾರಿಗಳ ಜತೆ ಚರ್ಚಿಸಿ ರೋಗಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಆರೋಗ್ಯ ಸೇವೆ ನೀಡಿದಂತೆ ಸೂಚಿಸಿದರು. ಯಾವುದೇ ತೊಂದರೆಗಳಿದ್ದರೆ ಸಂಪರ್ಕಿಸುವಂತೆ ತಿಳಿಸಿದರು.

ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಬುಡಾ ಅಧ್ಯಕ್ಷ ದೇವದಾಸ ಶೆಟ್ಟಿ, ಗ್ರಾ.ಪಂ.ಸದಸ್ಯರಾದ ರವಿರಾಮ್ ಶೆಟ್ಟಿ, ವಿನೋದ್ ಪೂಜಾರಿ, ವಾಸು, ಪ್ರಮುಖರಾದ ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ ವಾಮದಪದವು, ದಿನೇಶ್ ಶೆಟ್ಟಿ ದಂಬೆದಾರ್, ಜಗದೀಶ್ ಶೆಟ್ಟಿ, ಪ್ರಭಾಕರ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ದೇವಿಪ್ರಸಾದ್, ಉಮೇಶ್ ಶೆಟ್ಟಿ, ರಂಜಿತ್, ವಿಶ್ವ ನಾಥ ನಾಯ್ಕ, ಹರೀಶ್ ನಾಯ್ಕ್, ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ| ಉಮೇಶ್ ಅಡ್ಯಂತಾಯ, ಆಯುಷ್ ವೈದ್ಯಾಧಿಕಾರಿ ಡಾ| ವಸುಧಾ, ದಂತ ವೈದ್ಯೆ ಡಾ| ಅಕ್ಷತಾ, ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯಮನಪ್ಪ, ಗ್ರಾಮಕರಣಿಕೆ ಸ್ವಾತಿ ಉಪಸ್ಥಿತರಿದ್ದರು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...