ದೆಹಲಿ: ದಾವುದ್ ಇಬ್ರಾಹಿಂ ಸಹಚರ ಹಾಗೂ ಭೂಗತ ಪಾತಕಿ ಛೋಟಾ ರಾಜನ್ ದೆಹಲಿಯ ಏಮ್ಸ್ ಆಸ್ಪತ್ರೆಯ ಕೊರೊನಾ ಸೋಂಕಿನಿಂದ ಮೇ 7ರ ಶುಕ್ರವಾರ ಮೃತಪಟ್ಟಿದ್ದಾನೆ.
ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಛೋಟಾ ರಾಜನ್ ಗೆ ಕೊರೊನಾ ಸೋಂಕು ದೃಡಪಟ್ಟ ಹಿನ್ನೆಲೆಯಲ್ಲಿ ಏಪ್ರಿಲ್ 26ರಂದು ದೆಹಲಿಯ ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಈಗ ಚಿಕಿತ್ಸೆ ಫಲಕಾರಿಯಾಗದೇ ಛೋಟಾ ರಾಜನ್ ಸಾವನ್ನಪ್ಪಿರುವುದಾಗಿ ಏಮ್ಸ್ ಆಸ್ಪತ್ರೆ ತಿಳಿಸಿದೆ.
ಭೂಗತ ಪಾತಕಿ ಛೋಟಾ ರಾಜನ್ ನನ್ನು 2015ರಲ್ಲಿ ಇಂಡೋನೇಷ್ಯಾದಲ್ಲಿ ಭಾರತದ ಅಧಿಕಾರಿಗಳು ಬಂಧಿಸಿದ್ದರು. ಆತನನ್ನು ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಭಯೋತ್ಪಾದನೆ ತಡೆ ಕಾಯ್ದೆ ಹಾಗೂ ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆಯಡಿ ಆತನ ವಿರುದ್ಧ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.