ಬೆಳ್ತಂಗಡಿ: ಆಧುನಿಕ ಭಾರತದ ನಿರ್ಮಾತೃ, ಡಿಜಿಟಲ್ ಕ್ರಾಂತಿಯ ಮೂಲಕ ದೇಶದ ಪ್ರಗತಿಗೆ ಮುನ್ನುಡಿ ಬರೆದ ಮಾಜಿ ಪ್ರಧಾನಿ ರಾಜೀವ್ ಗಾಂಧಿರವರ 30ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಇಂದು ಬ್ಲಾಕ್ ಕಾಂಗ್ರೆಸ್ ಸಮಿತಿ ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ವತಿಯಿಂದ ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರಕ್ಕೆ ಕೊರೊನ ನಿಯಂತ್ರಣಕ್ಕೆ ಪೂರಕವಾಗಿ ಅಗತ್ಯ ವೈದ್ಯಕೀಯ, ಔಷಧಿ ಸಾಮಾಗ್ರಿ ಹಾಗೂ ಒಳರೋಗಿಗಳಿಗೆ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.
ಈ ಸೇವಾ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ, ಕರ್ನಾಟಕ ವಿಧಾನ ಪರಿಷತ್ ಶಾಸಕರೂ ಆದ ಕೆ.ಹರೀಶ್ ಕುಮಾರ್, ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ ಕೆ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷರಾದ ಶೈಲೇಶ್ ಕುಮಾರ್ ಕುರ್ತೋಡಿ, ಗ್ರಾಮೀಣ ಅಧ್ಯಕ್ಷರಾದ ರಂಜನ್ ಜಿ ಗೌಡ, ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಹಿಮಾನ್ ಪಡ್ಪು,ಡಿಸಿಸಿ ಕಾರ್ಯದರ್ಶಿ ಜಗದೀಶ್ ಡಿ,ಎಪಿಎಂಸಿ ಮಾಜಿ ಅಧ್ಯಕ್ಷ ಭರತ್ ಕುಮಾರ್, ಯುವ ಕಾಂಗ್ರೆಸ್ ಮುಖಂಡರಾದ ಅಭಿನಂದನ್ ಹರೀಶ್, ಎಸ್ಸಿ ಘಟಕದ ಅಧ್ಯಕ್ಷ ಬಿ ಕೆ ವಸಂತ್,ಸಾಮಾಜಿಕ ಜಾಲತಾಣ ಅಧ್ಯಕ್ಷ ಸಂದೀಪ್ ಎಸ್ ನೀರಲ್ಕೆ ಅರ್ವ, ನಗರ ಪಂಚಾಯತ್ ಸದಸ್ಯರಾದ ಜನಾರ್ದನ್, ನಗರ ಪಂಚಾಯತ್ ಮಾಜಿ ಸದಸ್ಯ ಮಹಬೂಬ್, ಪ್ರಭಾಕರ್ ಶಾಂತಿಕೋಡಿ, ಅಜಯ್ ಮತ್ಲ, ಸತೀಶ್ ಶೆಟ್ಟಿ ಜೈನ್ ಪೇಟೆ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು. ಕೊರೊನ ನಿಯಮಾವಳಿಗಳಿಗೆ ಪೂರಕವಾಗಿ ವಿತರಣಾ ಕಾರ್ಯಕ್ರಮ ನಡೆಯಿತು.