Wednesday, April 10, 2024

ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಪಡಿತರದಾರರಿಗೆ ಸ್ಥಳೀಯ ಕೆಂಪು ಕುಚ್ಚಲಕ್ಕಿ ಸರಬರಾಜು, ವಿಧಾನ ಸೌಧದಲ್ಲಿ ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ಸಭೆ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದ ಹಿನ್ನೆಲೆಯಲ್ಲಿ, ಇಂದು ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವರಾದ ಶ್ರೀ ಉಮೇಶ್ ಕತ್ತಿಯವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ MO 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ಸುದೀರ್ಘ ಚರ್ಚೆ ನಡೆಸಿ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ಥಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಂಡಿತು.

ಅವಳಿ ಜಿಲ್ಲೆಗಳ ಕೆಂಪು ಕುಚ್ಚಲಕ್ಕಿ ಬೇಡಿಕೆಯನ್ನು ಪೂರೈಸಲು ಸುಮಾರು 20 ಲಕ್ಷ ಕ್ವಿಂಟಾಲ್ ಭತ್ತದ ಪೂರೈಕೆ ಆಗಬೇಕಾಗಿದ್ದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹೊರತಾಗಿಯೂ ಮಂಡ್ಯ, ಮೈಸೂರು, ರಾಮನಗರ, ಬೆಳಗಾವಿ ಜಿಲ್ಲೆಗಳಿಂದ ಭತ್ತ ಖರೀದಿಸಲು ಸಭೆಯಲ್ಲಿ ಚರ್ಚೆ ನಡೆಯಿತು. ಕೇಂದ್ರದ ಅನುಮತಿ ಪಡೆದು ನವೆಂಬರ್ ತಿಂಗಳಿಂದ ಸ್ಥಳೀಯ ಅಕ್ಕಿ ಗಿರಣಿಗಳ ಮೂಲಕ ಕೆಂಪು ಕುಚ್ಚಲಕ್ಕಿ ಉತ್ಪಾದಿಸಿ ಪಡಿತರದ ಮೂಲಕ ಜನಸಾಮಾನ್ಯರಿಗೆ ಹಂಚಲು ಕ್ರಮಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರು ತಿಳಿಸಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉತ್ಪಾದನೆಯಾಗಿ ಪೂರೈಕೆ ಆಗಬಹುದಾದ ಭತ್ತದ ಪ್ರಮಾಣ ಕಡಿಮೆಯಾದಲ್ಲಿ, ಇತರ ಜಿಲ್ಲೆಗಳಿಂದ ಬತ್ತವನ್ನು ಖರೀದಿಸಲಾಗುವುದು ಎಂದು ಕರ್ನಾಟಕ ಆಹಾರ ಮತ್ತು ನಾಗರೀಕ ಪೂರೈಕೆ ಸರಬರಾಜು ನಿಗಮ ನಿಯಮಿತದ ಉಪಾಧ್ಯಕ್ಷರಾದ  ಕಿರಣ್ ಕುಮಾರ್ ಕೊಡ್ಗಿಯವರು ತಿಳಿಸಿದರು.

ಸಭೆಯಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಚಿವರ ಆಪ್ತ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

 

More from the blog

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ

ಗುಡ್ಡೆ ಅಂಗಡಿ ನೂರೂದ್ದೀನ್ ಮಸೀದಿಯಲ್ಲಿ ಈದ್ ಮುಬಾರಕ್ ಆಚರಣೆ ನಡೆಯಿತು. ಖತೀಬರಾದ ಅಸ್ವೀಫ್ ಧಾರಿಮಿ ಅವರು ನೇತೃತ್ವ ವಹಿಸಿ ಈದ್ ಸಂದೇಶವನ್ನು ಸಾರಿದರು.. ಪುರಸಭಾ ಸದಸ್ಯ ಅಬುಬಕ್ಕರ್ ಸಿದ್ದೀಕ್, ಎನ್‌.ಜೆ.ಎಮ್ ಮಸೀದಿ  ಇದರ ಅಧ್ಯಕ್ಷ...