ಮಾಣಿ: ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ ಇವರ ಅಧ್ಯಕ್ಷತೆಯಲ್ಲಿ ಅಂಗನವಾಡಿ ಕಾರ್ಯಕರ್ತರ ವಿಶೀಷ ಸಭೆ ಮಾಣಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಪಂಚಾಯತ್ ಅಧ್ಯಕ್ಷರು, ಮಾಣಿ ಗ್ರಾಮ ಪಂಚಾಯತ್ ಟಾಸ್ಕ್ ಫೋರ್ಸ್ ಸಮಿತಿ ಕೋವಿಡ್ ಮುಂಜಾಗೃತೆ ಮತ್ತು ಲಸಿಕೆ ವಿತರಣೆಯ ವಿಚಾರದಲ್ಲಿ ಬಹಳಷ್ಟು ಮುತುವರ್ಜಿಯನ್ನು ವಹಿಸಿಕೊಂಡು ಕೆಲಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ಗ್ರಾಮದಲ್ಲಿ ಲಸಿಕೆ ಪಡೆದವರ ಮತ್ತು ಪಡೆಯದವರ ಸಮೀಕ್ಷೆಯನ್ನು ಮಾಡುವ ಬಗ್ಗೆ ಚಿಂತಿಸುತ್ತಿದೆ. ಇದಕ್ಕೆ ಅಂಗನವಾಡಿ ಕಾರ್ಯಕರ್ತರು ನಮ್ಮ ಜೊತೆಗೆ ಕೈಜೋಡಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಇಬ್ರಾಹಿಂ.ಕೆ.ಮಾಣಿ, ಮೆಲ್ವಿನ್ ಕಿಶೋರ್ ಮಾರ್ಟಿಸ್ ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ ಗಟ್ಟಿಯವರು ಉಪಸ್ಥಿತರಿದ್ದರು.
ನಮ್ಮ ಗ್ರಾಮದಲ್ಲಿ 100% ಕೋವಿಡ್ ಲಸಿಕೆಯ ಗುರಿ ನಮ್ಮದು