ಬಂಟ್ವಾಳ: ಕೊರೋನ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ರಾಜ್ಯದಲ್ಲಿ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿ ಆದೇಶ ಹೊರಡಿಸಿದೆ ಎನ್ನಲಾಗಿದೆ.
ಇಂದು ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಮೇ 11ರಿಂದ ಮೇ 24ರ ವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಇರಲಿದೆ.
ಲಾಕ್ ಡೌನ್ ವೇಳೆ ಯಾವ ಸೇವೆ ಇರುತ್ತದೆ ಮತ್ತು ಯಾವ ಸಮಯದಲ್ಲಿ ಅಗತ್ಯ ಸಾಮಾಗ್ರಿಗಳ ಅಂಗಡಿಗಳು ತೆರೆಯಲು ಅವಕಾಶ ಇರುತ್ತದೆ ಎಂಬುದರ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.