ಬಂಟ್ವಾಳ: ಅರಬ್ಬಿ ಸಮುದ್ರದ ವಾಯುಭಾರ ಕುಸಿತ ಉಂಟಾಗಿದ್ದು ಚಂಡಮಾರುತ ಏಳುವ ಸಾಧ್ಯತೆಗಳಿದ್ದು ಅದಕ್ಕೆ ಮಯನ್ಮಾರ್ ತೌಕ್ತೇ ಎಂದು ಹೆಸರಿಟ್ಟಿದೆ.
ಪ್ರಸಕ್ತ ವರ್ಷದ ಮೊದಲ ಚಂಡಮಾರುತ ಇದಾಗಿದ್ದು ಮೇ14ರಂದು ರೂಪುಗೊಳ್ಳಲು ಪ್ರಾರಂಭಿಸಲಿದ್ದು ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ. ಮೇ 16ರಷ್ಟೊತ್ತಿಗೆ ಚಂಡಮಾರುತ ತೀವ್ರವಾಗುವ ನಿರೀಕ್ಷೆ ಇದೆ ಕರ್ನಾಟಕ, ಕೇರಳ, ತಮಿಳುನಾಡು ಸೇರಿದಂತೆ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಚಮ್ಡಮಾರುತದ ಪರಿಣಾಮ ಗಾಳಿಯು ಪ್ರತಿ ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದೆ, ಮೇ 20ರಂದು ಗುಜರಾತ್ ನ ಕಛ್ ಅಥವಾ ಆ ರಾಜ್ಯದ ಉತ್ತರ ಭಾಗವನ್ನು ಹಾದು ಒಮಾನ್ ನತ್ತ್ ಸಾಗಲಿದೆ. ಚಂಡಮಾರುತದ ಪರಿಣಾಮ ಮಹಾರಾಷ್ಟ್ರ, ಕರ್ನಾಟಕ, ಕೇರಳ, ಗೋವಾದ ಸಮುದ್ರ ತೀರಗಳಲ್ಲಿ ತೀವ್ರ ಗಾಳಿ ಬೀಸುವ ನಿರೀಕ್ಷೆ ಇದ್ದು ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹೇಳಲಾಗಿದೆ.
ಆಗ್ನೇಯ ಅರಬ್ಬಿ ಸಮುದ್ರದಿಂದ ಚಂಡಮಾರುತವು ಮೇ 16ರಷ್ಟೊತ್ತಿಗೆ ಉತ್ತರ – ವಾಯುವ್ಯ ದಿಕ್ಕಿಗೆ ಚಲಿಸುವ ಸಾಧ್ಯತೆ ಇದೆ. ಹೀಗಾಗಿ ಮೇ 16ರ ಬಳಿಕ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದೆ ಎನ್ನಲಾಗಿದೆ.