ನವದೆಹಲಿ: ಭಾರತದಲ್ಲಿ ಕೊರೋನಾ ಸಂಕಷ್ಟದಲ್ಲಿರುವಾಗ ಈಗಾಗಲೇ ದೇಶೀಯ ಲಸಿಕೆಗಳಾದ ಕೋವಾಕ್ಸಿನ್, ಕೋವಿಶೀಲ್ಡ್ ಜನರಿಗೆ ಅಲ್ಪ ಆತಂಕ ದೂರು ಮಾಡಿದ್ದೂ, ಇದೀಗ ತುರ್ತು ಬಳಕೆಗೆ ಅನುಮೊದನೆ ಪಡೆದ ಮತ್ತೊಂದು ಲಸಿಕೆ ಸ್ಫುಟ್ನಿಕ್ ವಿ ರಷ್ಯಾದಿಂದ ಭಾರತಕ್ಕೆ ಬಂದು ತಲುಪಿದೆ. ಮುಂದಿನ ವಾರದಿಂದ ಭಾರತದ ಮಾರುಕಟ್ಟೆಯಲ್ಲಿ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ಸಿಗಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ನೀತಿ ಆಯೋಗ ಸದಸ್ಯರಾದ ಡಾ. ವಿ.ಕೆ. ಪಾಲ್ ಅವರು ಈ ಮಾಹಿತಿಯನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಸ್ಫುಟ್ನಿಕ್ ಲಸಿಕೆ ಭಾರತಕ್ಕೆ ಬಂದಿದ್ದು, ಇದು ಮುಂದಿನ ವಾರ ಮಾರುಕಟ್ಟೆಯಲ್ಲಿ ಲಭ್ಯವಿರುತ್ತದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ಹೇಳಲು ನನಗೆ ಸಂತೋಷವಾಗಿದೆ. ರಷ್ಯಾದಿಂದ ಬಂದಿರುವ ಸೀಮಿತ ಪೂರೈಕೆಯ ಮಾರಾಟ ಮುಂದಿನ ವಾರ ಪ್ರಾರಂಭವಾಗಲಿದೆ ಎಂದು ನಾವು ಭರವಸೆ ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಸ್ಪುಟ್ನಿಕ್ ವಿ ಲಸಿಕೆಯ ಎರಡು ಡೋಸ್‌ಗಳು ಕೋವಿಡ್ ವಿರುದ್ಧ ಶೇ 91.6ರಷ್ಟು ಪರಿಣಾಮಕಾರಿ ಎಂದು ಅಧ್ಯಯನದ ವರದಿಗಳು ತಿಳಿಸಿವೆ.