ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ ವಿಟ್ಲ ಪಡ್ನೂರು ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಇರುವ 34 ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ವಿಟ್ಲ ಪಡ್ನೂರು ಗ್ರಾಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ,ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಶೋಭಾ ರೈ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಸಂದೇಶ್ ಶೆಟ್ಟಿ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಹರ್ಷದ್ ಕುಕ್ಕಿಲ, ಶರೀಫ್ ಕೊಡಂಗೆ,ಶ್ರೀಮತಿ ಲಕ್ಷ್ಮೀ ಕಡಂಬು,ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿರಾಜ್ ಮದಕ,ಮಾಜಿ ಪಂಚಾಯತ್ ಸದಸ್ಯರಾದ ಸಿದ್ಧಿಕ್ ಸರವು, ಹರ್ಷದ್ ಸರವು ಮೊದಲಾದವರು ಉಪಸ್ಥಿತರಿದ್ದರು.