Monday, April 8, 2024

ಬಾಲಕಾರ್ಮಿಕತೆ ನಿಲ್ಲಿಸಿ ,ಶಿಕ್ಷಣ ಒದಗಿಸಿ;ಕ್ಯಾಂಪಸ್ ಫ್ರಂಟ್ ವತಿಯಿಂದ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಮನವಿ

ವಿಟ್ಲ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ಆಯೋಜಿಸಿರುವಂತಹ “ಬಾಲಕಾರ್ಮಿಕತೆ ನಿಲ್ಲಿಸಿ, ಶಿಕ್ಷಣ ಒದಗಿಸಿ.” ಅಭಿಯಾನದ ಭಾಗವಾಗಿ ಕೊಳ್ನಾಡು, ವಿಟ್ಲ ಪಡ್ನೂರು, ಕೊಡಂಗಾಯಿ, ವಿಟ್ಲ ಮುಡ್ನೂರು, ಗೋಳ್ತಮಜಲು, ಮಂಚಿ, ಸಜಿಪ ನಡು, ಸಜಿಪ ಮೂಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಿಗೆ ಮತ್ತು ವಿಟ್ಲ ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು. ಗ್ರಾಮದಲ್ಲಿರುವ ಪ್ರತಿಯೊಂದು ವಿದ್ಯಾರ್ಥಿ ಕೂಡ ಶಿಕ್ಷಣದಿಂದ ವಂಚಿತರಾಗಬಾರದು , ಬಾಲ ಕಾರ್ಮಿಕತೆಗೆ ಒಳಗಾದ ಮಕ್ಕಳಿದ್ದರೆ ಅವರಿಗೆ ಶಿಕ್ಷಣ ಒದಗಿಸುವ ಯೋಜನೆಯನ್ನು ಸರ್ಕಾರ ರೂಪಿಸಬೇಕು,ಕಾರ್ಯಾಂಗ ವ್ಯವಸ್ಥೆಯನ್ನು ಸರಿಯಾಗಿ ಸದುಪಯೋಗಪಡಿಸಿ ತಳ ಮಟ್ಟದಲ್ಲಿ ಅಂದರೆ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಮತ್ತು ಮಹಾನಗರ ಪಾಲಿಕೆಯ ಅಡಿಯಲ್ಲಿ ಬಾಲ ಕಾರ್ಮಿಕತೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದ ಬಗ್ಗೆ ಸರಕಾರ ಚಿಂತಿಸಬೇಕಾಗಿದೆ ಎಂದು ಆಗ್ರಹಿಸಿ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಉಪಾಧ್ಯಕ್ಷ ಸಂಶುದ್ದೀನ್ ಮತ್ತುh ಉಪಾಧ್ಯಕ್ಷರಾದ ಇರ್ಶಾದ್ ಮತ್ತು ಸಮಿತಿ ಸದಸ್ಯರಾದ ಮುಕ್ತಾರ್, ನಾಸಿರ್ ಮತ್ತು ಯುನಿಟ್ ನಾಯಕರಾದಂತಹ ನಿಹಾಲ್, ಮಕ್ಶಿದ್, ಅನ್ವರ್, ಜಾಫರ್, ಮತ್ತು ಸದಸ್ಯರು ಉಪಸ್ಥಿತರಿದ್ಧರು.

More from the blog

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...

ಲೋಕಾಯುಕ್ತ ಇಲಾಖೆಯಿಂದ ಸಾರ್ವಜನಿಕ ಜನಸಂಪರ್ಕ ಸಭೆ

ಬಂಟ್ವಾಳ: ಲೋಕಾಯುಕ್ತ ಇಲಾಖೆಗೆ ಸಂಬಂಧಿಸಿದಂತೆ ಸಾರ್ವಜನಿಕ ಜನಸಂಪರ್ಕ ಸಭೆ ಬಿಸಿರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಎ. 8 ರಂದು ಸೋಮವಾರ ಲೋಕಾಯುಕ್ತ ಡಿ.ವೈ.ಎಸ್.ಪಿ. ಗಾನ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ಜರುಗಿತು. ಈ ಸಂದರ್ಭದಲ್ಲಿ ಮಾತನಾಡಿದ...