ಬಂಟ್ವಾಳ: ಚಲಿಸುತ್ತಿದ್ದ ಲಾರಿಯೊಂದರ ಚಕ್ರಕ್ಕೆ ಆಕಸ್ಮಿಕವಾಗಿ ಬೆಂಕಿ ಹಿಡಿದು ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನಲ್ಲಿ ನಡೆದಿದೆ.
ಬಿಸಿರೋಡಿನ ಸರ್ಕಲ್ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಘಟನೆ ನಡೆದಿದ್ದು ಸಕಾಲಿಕದಲ್ಲಿ ಬಂಟ್ವಾಳ ಅಗ್ನಿ ಶಾಮಕ ದಳದವರು ಆಗಮಿಸಿ ಬೆಂಕಿನಂದಿಸಿ ದೊಡ್ಡ ಅನಾಹುತ ತಪ್ಪಿಸಿದ್ದಾರೆ.
ಮಂಗಳೂರು ಬೈಕಂಪಾಡಿಯಿಂದ ಪೆಟ್ರೋಲಿಯಂ ಹಾಗೂ ಡೀಸೆಲ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ಹೋಗುವ ವೇಳೆ ಬಿಸಿರೋಡು ಸರ್ಕಲ್ ಬಳಿ ಸಮೀಪಿಸುತ್ತಿದ್ದಂತೆ ಚಕ್ರದ ಲ್ಲಿ ಬೆಂಕಿ ಹತ್ತಿಕೊಂಡು ಉರಿಯಲು ಪ್ರಾರಂಭವಾಗಿದೆ .
ಬೆಂಕಿ ಹತ್ತಿಕೊಂಡು ಉರಿಯುತ್ತಿರುವ ದೃಶ್ಯ ಕಂಡ ಸ್ಥಳೀಯ ಬಾಡಿಗೆ ಮನೆ ನಿವಾಸಿ ಉಪವಲಯ ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಂ
ಅವರು ಅಗ್ನಿಶಾಮಕ ದಳದವರಿಗೆ ಪೋನ್ ಮಾಡಿ ತಿಳಿಸಿದ್ದಾರೆ.ನ್pDSC_0432 ಪೆಕ್ಟರ್ ಯೋಗೀಶ್ , ಸಿಬ್ಬಂದಿ ಗಳು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಎಸ್. ಐ.ಅವಿನಾಶ್ ಬೇಟಿ ನೀಡಿದ್ದಾರೆ.