ಬಂಟ್ವಾಳ: ರಕ್ಷಿತಾ ಅರಣ್ಯವೊಂದರಿಂದ ಲಕ್ಷಾಂತರ ರೂ ಮೌಲ್ಯದ ಗಂಧದ ಮರಗಳನ್ನು ಕಳವು ಮಾಡಿ ಕಡಿದು ಬಳಿಕ ಮಾರಾಟ ಮಾಡಲು ಯತ್ನಿಸಿದ ವೇಳೆ ಮಿಂಚಿನ ಕಾರ್ಯಚರಣೆ ನಡೆಸಿದ ಬಂಟ್ಚಾಳ ವಲಯ ಆರಣ್ಯಾಧಿಕಾರಿಗಳ ಕಾರ್ಯಾಚರಣೆ ಇಬ್ಬರು ಆರೋಪಿ ಗಳ ಬಂಧನ, ಕಾರ್ಯಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಪಾತೂರು ನಿವಾಸಿ ಇಬ್ರಾಹಿಂ, ಹಾಗೂ ಇರಾ ಗ್ರಾಮದ ಮೊಯಿದ್ದೀನ್ ಬಂಧಿತ ಆರೋಪಿಗಳು‌.
ಇನ್ನುಳಿದ0ತೆ ಸಿದ್ದೀಕ್ ಹಾಗೂ ಸಿದ್ದೀಕ್ ಯಾನೆ ಕೊರಂಗು ಸಿದ್ದೀಕ್ ತಲೆಮರೆಸಿಕೊಂಡ ಆರೋಪಿಗಳು‌.
ಅಂದಾಜು ಮೂರು ಲಕ್ಷ ಮೌಲ್ಯ ದ ಗಂಧದ ಮರದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಟ್ವಾಳ ತಾಲೂಕಿನ ವೀರಕಂಬ ರಕ್ಷಿತಾ ಅರಣ್ಯ ದಿಂದ ಅಕ್ರಮವಾಗಿ ಲಕ್ಷಾಂತರ ರೂ ಮೌಲ್ಯದ ಗಂಧದ ಮರಗಳನ್ನು ಕಡಿದು ತುಂಡು ಮಾಡಿ ಮಾರಟ ಮಾಡಲು ತಯಾರಿ ನಡೆಸಿದ್ದರು.
ಈ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆಯ ಅಧಿಕಾರಿಗಳು ಮಿಂಚಿನ ಕಾರ್ಯ ಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸ್ಥಳಕ್ಕೆ ಬೇಟಿ ನೀಡಿದ ಸಂಧರ್ಭದಲ್ಲಿ ಆರೋಪಿಗಳು ಕಾಡು ಪ್ರಾಣಿಯಾದ ಉಡ ವೊಂದನ್ನು ಹಿಡಿದು ಪದಾರ್ಥ ಮಾಡಲು ತಯಾರಿ ನಡೆಸುತ್ತಿದ್ದು ಅ ಪ್ರಾಣಿಯನ್ನು ಕೂಡ ರಕ್ಷಣೆ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದ್ದು ಸ್ಪಷ್ಟವಾದ ಮಾಹಿತಿ ತನಿಖೆಯ ಬಳಿಕ ತಿಳಿಯಬೇಕಾಗಿದೆ.
ಆರೋಪಿಗಳ ಬಂಧಿಸಿದ ಅರಣ್ಯಾಧಿಕಾರಿಗಳು ವಿಚಾರಣೆ ಕಾರ್ಯ ಮುಂದುವರಿಸಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here