Wednesday, April 10, 2024

ಬಿಸಿರೋಡು ಡಿಪೋದಿಂದ ಕೆ.ಎಸ್.ಆರ್.ಟಿ.ಸಿ.ಬಸ್ ಸೇವೆ ಆರಂಭ. ಲಾಕ್ ಡೌನ್ ಸಡಿಲಗೊಂಡ ಬಳಿಕ ಸಂಚಾರ ಆರಂಭ ಮಾಡಿದ ಸಂಸ್ಥೆ

ಬಂಟ್ವಾಳ: ದ‌.ಕ‌‌‌.ಜಿಲ್ಲೆಯ ಲ್ಲಿ ಬಸ್ ಸಂಚಾರಕ್ಕೆ ಜಿಲ್ಲಾಡಳಿತ ಕೋವಿಡ್ ನಿಯಮ ಪಾಲಿಸಿಕೊಂಡು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಬೆಳಿಗ್ಗೆ ಯಿಂದಲೇ ಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರ ಆರಂಭಿಸಿದೆ.

ಬಸ್ ಸಂಚಾರ ಆರಂಭ ಮಾಡಿದರೂ ಕೂಡ ಜನ ಮಾತ್ರ ವಿರಳವಾಗಿತ್ತು .

ಕೋವಿಡ್ ನಿಯಮ ಪಾಲನೆ ಮಾಡಿಕೊಂಡು ಸೇವೆ ಆರಂಭ ಮಾಡಿದ ಕೆ.ಎಸ್.ಆರ್.ಟಿ.ಸಿ. ಎಂದಿನಂತೆ ಸೇವೆ ನೀಡಿದೆ.

ಬಸ್ ಸಂಚಾರಕ್ಕೆ ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ಸಂಚಾರ ಕ್ಕೆ ಅವಕಾಶ ಇದ್ದ ಹಿನ್ನೆಲೆಯಲ್ಲಿ ಜನ ಪೇಟೆ ಗೆ ಬರುವುದು ವಿರಳವಾಗಿತ್ತು.

ಬಿಸಿರೋಡು ಡಿಪೋದಿಂದ ಮಂಗಳೂರು ನಿಂದ ಬಿಸಿರೋಡುವರೆಗೆ ಒಟ್ಟು ನಾಲ್ಕು ಬಸ್ ಗಳು ಬೆಳಿಗ್ಗೆ ಯಿಂದ ಮಧ್ಯಾಹ್ನ ವರೆಗೆ ಸಂಚಾರ ಮಾಡಿದೆ.

ಜನರ ಬೇಡಿಕೆ ಅಂದರೆ ಜನರಿಗೆ ಅವಶ್ಯಕತೆ ಗಳಿಗೆ ಅನುಗುಣವಾಗಿ ಬಸ್ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.

ಬಸ್ ಸಂಚಾರ ಆರಂಭವಾದರೂ ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ.ಬಸ್ ನಿಲ್ದಾಣದ ಲ್ಲಿ ಮಾತ್ರ ಬೆರಳೆಣಿಕೆಯಷ್ಟು ಜನ ಅಲ್ಲೊಂದು ಇಲ್ಲೊಂದು ಎಂಬಂತೆ ಕಾಣುತ್ತಿದ್ದರು.

ಉಳಿದಂತೆ ಬಸ್ ನಿಲ್ದಾಣ ಜನರಿಲ್ಲದೆ ಬಿಕೋ ಎನ್ನುತ್ತಿತ್ತು.

 

  *ಬಿಸಿರೋಡು ಪುಲ್ ಬ್ಯೂಸಿ*

ಸರಕಾರ ಕೋವಿಡ್ ಲಾಕ್ ಡೌನ್ ನಿಯಮಗಳನ್ನು ಸಡಿಲ ಮಾಡಿ ಮಧ್ಯಾಹ್ನ 1 ಗಂಟೆವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿದ ಹಿನ್ನೆಲೆಯಲ್ಲಿ ಬೆಳಿಗ್ಗೆ ಯಿಂದಲೇ ಬಿಸಿರೋಡು ಪೇಟೆ , ಬಂಟ್ಚಾಳ, ಮೆಲ್ಕಾರ್, ಕಲ್ಲಡ್ಕ, ಪರಂಗಿಪೇಟೆ ಸಹಿತ ಪ್ರಮುಖ ನಗರದಲ್ಲಿ ಜನಜಂಗುಲಿ ಇತ್ತು.

ರಸ್ತೆ ತುಂಬಾ ವಾಹನಗಳು ಓಡಾಟ ಕ್ಕೆ ಶುರು ಮಾಡಿದೆ.

ಇಷ್ಟು ದಿನ ಮೌನವಾಗಿದ್ದ ಬಿಸಿರೋಡು ಪೇಟೆ ಗೆ ಇಂದು ಸಂಚಲನವನ್ನು ಉಂಟುಮಾಡಿದೆ.

ಮಧ್ಯಾಹ್ನ ದವರೆಗೆ ಜನರು ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡು ನಿಟ್ಟುಸಿರು ಬಿಟ್ಟಿದ್ದಾರೆ.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...