Saturday, October 21, 2023

ಬೋಳಂತೂರು: ಕಾಂಗ್ರೇಸ್ ವತಿಯಿಂದ ರಮಾನಾಥ ರೈ ನೇತ್ರತ್ವದಲ್ಲಿ ಕಿಟ್ ವಿತರಣೆ

Must read

ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ ಬೊಳಂತ್ತೂರು ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಇರುವ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಬೊಳಂತ್ತೂರು ಗ್ರಾಮದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ,ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ವಲಯ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವಜೀತ್ ಶೆಟ್ಟಿ,ಗ್ರಾಮ ಪಂಚಾಯತ್ ಸದಸ್ಯರುಗಳಾದ ಚಂದ್ರಶೇಖರ್ ರೈ,ಯಾಕುಬ್ , ಆಶ್ರಫ್, ಅನ್ಸರ್,ಶ್ರೀಮತಿ ಶಾಲಿನಿ,ಶ್ರೀಮತಿ ಮಹಾಲಕ್ಷ್ಮಿ,ಶ್ರೀಮತಿ ಅನಿತಾ ಪ್ರಮುಖರಾದ ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.

More articles

Latest article