Thursday, April 18, 2024

ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಪತ್ರಕರ್ತರಿಂದ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ ಸೌಹಾರ್ದತೆ , ಮಾನವೀಯ ಮೌಲ್ಯವನ್ನು ಬಿಂಬಿಸುವ ವರದಿಗೆ ನೀಡಲಾಗುವ `ಬ್ರ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ಮುದ್ರಣ ಮತ್ತು ದೃಶ್ಯ ಮಾಧ್ಯಮಗಳಲ್ಲಿ ಸೇವೆ ಸಲ್ಲಿಸುವ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 2020ನೇ ವರ್ಷದ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುವ ಪತ್ರಕರ್ತರು ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಪ್ರಶಸ್ತಿ ತಲಾ 5,001 ರೂ. ನಗದು, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆ ಒಳಗೊಂಡಿದೆ. ಅರ್ಜಿಗಳನ್ನು ಕಳುಹಿಸಲು 2021 ಜುಲೈ 5 ಕೊನೆಯ ದಿನವಾಗಿದೆ.
ಮಾನದಂಡ ಹೀಗಿದೆ
ಪ್ರಶಸ್ತಿಗೆ 2020ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಪ್ರಕಟ/ಪ್ರಸಾರವಾದ ವರದಿಗಳನ್ನು ಪರಿಗಣಿಸಲಾಗುವುದು.
ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುವ ಮುದ್ರಣ ಮಾಧ್ಯಮಗಳ ಪತ್ರಕರ್ತರು ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿಯ ನಾಲ್ಕು ಪ್ರತಿಗಳನ್ನು (ಒಂದು ಮೂಲಪ್ರತಿ ಕಡ್ಡಾಯ) ಸಲ್ಲಿಸಬೇಕು. ವರದಿ ಪ್ರಕಟವಾದ ದಿನಾಂಕದ ಕುರಿತಂತೆ ಸೂಕ್ತ ದಾಖಲೆ ಅಗತ್ಯ.
ಸ್ಥಳೀಯ /ರಾಜ್ಯ/ರಾಷ್ಟ್ರೀಯ ದೃಶ್ಯ ಮಾಧ್ಯಮಗಳ ಸುದ್ದಿ ವಿಭಾಗದಲ್ಲಿ ಪ್ರಸಾರವಾಗಿರುವ ವರದಿಯ ಬಗ್ಗೆ ವರದಿ ಪ್ರಸಾರವಾಗಿರುವ ದಿನಾಂಕ ಸಹಿತ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸತಕ್ಕದ್ದು.
ಯೂಟ್ಯೂಬ್ ನ ಡಾಕ್ಯುಮೆಂಟರಿಗಳು, ಆನ್ಲೈನ್, ಬ್ಲಾಗ್ ಬರಹಗಳನ್ನು ಈ ವಿಭಾಗಕ್ಕೆ ಪರಿಗಣಿಸಲಾಗುವುದಿಲ್ಲ. ಆಯ್ಕೆಗಾರರ ನಿರ್ಧಾರವೇ ಅಂತಿಮವಾಗಿರುತ್ತದೆ.
ಅರ್ಜಿ ಸಲ್ಲಿಸಲು ವಿಳಾಸ : ಪ್ರಧಾನ ಕಾರ್ಯದರ್ಶಿ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ಭವನ, ಲೇಡಿಹಿಲ್ ,ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು-6

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...