ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಕಾರಣದಿಂದಾಗಿ ರಾಜ್ಯದಲ್ಲಿನ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿ, ಪ್ರಥಮ ಪಿಯುಸಿ ಹಾಗೂ ಎಸ್ ಎಸ್ ಎಲ್ ಸಿ ಅಂಕಗಳ ಆಧಾರದ ಮೇಲೆ ಫಲಿತಾಂಶ ಪ್ರಕಟಿಸುವಂತ ನಿರ್ಧಾರವನ್ನು ಸರ್ಕಾರ ಕೈಗೊಂಡಿತ್ತು. ಇದರ ಬೆನ್ನಲ್ಲೇ, ವೃತ್ತಿಪರ ಕೋರ್ಸ್ ಗಳ ಸಿಇಟಿಗೆ ಮುಹೂರ್ತ ಫಿಕ್ಸ್ ಮಾಡಿದೆ. ಆಗಸ್ಟ್ 28, 29ರಂದು ನಡೆಸಲು ನಿರ್ಧರಿಸಿದೆ.
ಈ ಕುರಿತಂತೆ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥ ನಾರಾಯಣ ಮಾಹಿತಿ ನೀಡಿದ್ದು, ವೃತ್ತಿ ಪರ ಕೋರ್ಸ್ ಗಳಿಗೆ ದ್ವಿತೀಯ ಪಿಯುಸಿ ಅಂಕಗಳನ್ನು ಈ ಬಾರಿ ಪರಿಗಣಿಸದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ತಜ್ಞರ ಸಭೆಯನ್ನು ನಡೆಸಲಾಗಿದೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ವೃತ್ತಿಪರ ಕೋರ್ಸ್ ಗಳಿಗೆ ನಡೆಸಲಾಗುವಂತ ಸಿಇಟಿ ಪರೀಕ್ಷೆಯನ್ನು ಆಗಸ್ಟ್ 28, 29ರಂದು ನಡೆಸಲಾಗುತ್ತದೆ. ಇದರ ನೊಂದಣಿ ಕಾರ್ಯ ಜೂನ್.15ರಿಂದ ಆರಂಭವಾಗಲಿದೆ.ಮೊದಲ ದಿನ ಗಣಿತ, ಜೀವಶಾಸ್ತ್ರ ಪರೀಕ್ಷೆ ನಡೆಸಲಾಗುತ್ತದೆ. 2 ನೇ ದಿನ ರಾಸಾಯನ ಶಾಸ್ತ್ರ ಭೌತ ಶಾಸ್ತ್ರ ಪರೀಕ್ಷೆ ನಡೆಯಲಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಅಂಕ ಪರಿಗಣನೆ ಮಾಡಲಾಗುತ್ತದೆ ಎಂಬುದಾಗಿ ತಿಳಿಸಿದರು.