Tuesday, April 9, 2024

ಬಂಟ್ವಾಳ ತಾಲೂಕಿನ ಸಿ.ಗ್ರೇಡ್ ದೇವಸ್ಥಾನದ ಸಿಬ್ಬಂದಿ ಗಳಿಗೆ ದಿನಸಿ ಸಾಮಾಗ್ರಿ ವಿತರಣೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಸರಕಾರವು ಅಸಂಘಟಿತ ಕಾರ್ಮಿಕರಿಗೆ ಈಗಾಗಲೇ ವಿಶೇಷ ಪ್ಯಾಕೇಜ್ ಘೋಷಿಸಿದ್ದು, ಉಳಿದಂತೆ ಅಶಕ್ತರಿಗೆ ಬೇರೆ ಬೇರೆ ಮೂಲಗಳಿಂದ ನೆರವು ನೀಡಲು ಪ್ರಯತ್ನಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬಂಟ್ವಾಳದ ಪೊಳಲಿ ಹಾಗೂ ಪಣೋಲಿಬೈಲು ಕ್ಷೇತ್ರದಿಂದ ಒಟ್ಟು ೫೨ ಸಿ ಗ್ರೇಡ್ ದೇವಸ್ಥಾನದ ಸಿಬಂದಿಗೆ ದಿನಸಿ ಸಾಮಾಗ್ರಿ ವಿತರಿಸಲಾಗುತ್ತಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮುಜರಾಯಿ ಇಲಾಖೆಯ ಎ ಗ್ರೇಡ್ ದೇವಸ್ಥಾನವಾದ ಪೊಳಲಿ ಕ್ಷೇತ್ರದಿಂದ ಬಂಟ್ವಾಳದ ೨೬ ಸಿ ಗ್ರೇಡ್ ದೇವಸ್ಥಾನಗಳ ಅರ್ಚಕರು, ಸಿಬಂದಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಿ ಮಾತನಾಡಿದರು.

ರಾಜ್ಯ ಧಾರ್ಮಿಕ ದತ್ತಿ ಪರಿಷತ್ತಿನ ಸದಸ್ಯ ಸೂರ್ಯನಾರಾಯಣ ಭಟ್ ಕಶೆಕೋಡಿ, ಜಿಲ್ಲಾ ಧಾರ್ಮಿಕ ದತ್ತಿ ಪರಿಷತ್ತಿನ ಸದಸ್ಯ ಗಿರಿಪ್ರಕಾಶ್ ತಂತ್ರಿ, ಪೊಳಲಿ ಕ್ಷೇತ್ರದ ಅನುವಂಶಿಕ ಆಡಳಿತ ಮೊಕ್ತೇಸರ ಡಾ.ಮಂಜಯ್ಯ ಶೆಟ್ಟಿ, ಮೊಕ್ತೇಸರರಾದ ಚೇರ ಸೂರ್ಯನಾರಾಯಣ ರಾವ್, ಪವಿತ್ರಪಾಣಿ ಪಿ.ಮಾಧವ ಭಟ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪಿ.ಜಯಮ್ಮ, ಪೊಳಲಿ ಸಿಎ ಬ್ಯಾಂಕ್ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಉಪಾಧ್ಯಕ್ಷ ವೆಂಕಟೇಶ್ ನಾವಡ, ಬಡಗಬೆಳ್ಳೂರು ಸಿಎ ಬ್ಯಾಂಕ್ ಅಧ್ಯಕ್ಷ ನಂದರಾಮ ರೈ, ವಾರ್ ರೂಮ್ ಪ್ರಮುಖರಾದ ಪುರುಷೋತ್ತಮ ಶೆಟ್ಟಿ ವಾಮದಪದವು ಮೊದಲಾದವರು ಉಪಸ್ಥಿತರಿದ್ದರು.

More from the blog

ಭಕ್ತರೇ ಗಮನಿಸಿ…. ಈ ದಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಆಗೇಲು ಸೇವೆ ಇರುವುದಿಲ್ಲ

ಬಂಟ್ವಾಳ ತಾಲೂಕು ಸಜೀಪಮೂಡ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏ.12, 14, 16 ರಂದು ಆಗೇಲು ಸೇವೆ ಇರುವುದಿಲ್ಲ. ಏ. 19ರಿಂದ ಆಗೇಲು ಸೇವೆ ನಡೆಯುತ್ತದೆ ಹಾಗೂ ಏ.21 ರಂದು ಆಗೇಲು ಸೇವೆ...

ಲೋಕಸಭಾ ಚುನಾವಣೆ : ಅಕ್ರಮ ವ್ಯವಹಾರಿಗಳಿಗೆ ರಹದಾರಿಯಾದ ಸಾಲೆತ್ತೂರು ಬಳಿಯ ಕೂಡುರಸ್ತೆ ಚೆಕ್ ಪೋಸ್ಟ್

ವಿಟ್ಲ: ಲೋಕಸಭಾ ಚುನಾವಣೆಗೆ ಈಗಾಗಲೇ ದಿನ ನಿಗದಿಯಾಗಿದ್ದು, ಜಿಲ್ಲಾಡಳಿತ ಸರ್ವ ಸನ್ನದ್ದವಾಗಿದೆ. ಅಕ್ರಮಗಳನ್ನು ತಡೆಗಟ್ಟುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾಡಳಿತವು ಗಡಿಪ್ರದೇಶ ಸೇರಿದಂತೆ ಜಿಲ್ಲೆಯಲ್ಲಿ 23 ಕಡೆಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಿದೆ. ಆದರೆ...

5,8,9,11ನೇ ತರಗತಿ ಪರೀಕ್ಷೆ ಫಲಿತಾಂಶಕ್ಕೆ ಸುಪ್ರೀಂ ತಡೆ

ಹೊಸದಿಲ್ಲಿ: 5, 8, 9 ಮತ್ತು 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲು ಸುಪ್ರೀಂ ಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ. ರಾಜ್ಯದಲ್ಲಿ 5, 8, 9ನೇ ತರಗತಿಗೆ ಬೋರ್ಡ್​ ಪರೀಕ್ಷೆ ಮುಗಿದಿದ್ದು,...

ಮನೆಯೊಳಗೆ ‌ನುಗ್ಗಿ ವ್ಯಕ್ತಿಗೆ ಚೂರಿ ಇರಿತ : ಆರೋಪಿ ಪರಾರಿ

ಬಂಟ್ವಾಳ: ಮನೆಯೊಳಗೆ ‌ನುಗ್ಗಿ ವ್ಯಕ್ತಿಯೋರ್ವನಿಗೆ ಚೂರಿ ಹಾಕಿ ಪರಾರಿಯಾಗಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಪುದು ಎಂಬಲ್ಲಿ ನಡೆದಿದೆ. ಪುದು ಗ್ರಾಮದ 10 ನೇ ಮೈಲಿಕಲ್ಲು ನಿವಾಸಿ...