ಬಂಟ್ವಾಳ: ಚಿಕ್ಕಪ್ಪನಿಂದಲೇ ನಿರಂತರವಾಗಿ ದೈಹಿಕ ಅತ್ಯಾಚಾರಗೊಳಗಾದ ಯುವತಿಯ ದೂರಿನ ಮೇರೆಗೆ ವ್ಯಕ್ತಿಯೋರ್ವನ ಮೇಲೆ ಅತ್ಯಾಚಾರ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ನಡೆದಿದೆ.
ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾ.ಪ.ವ್ಯಾಪ್ತಿಯ ಆಲಾಡಿ ನಿವಾಸಿ ಪುರುಷೋತ್ತಮ ಎಂಬಾತ ಆತನ ಪತ್ನಿಯ ಅಕ್ಕನ ಮಗಳ ಮೇಲೆಯೇ ನಿರಂತರವಾಗಿ ಬೆದರಿಕೆ ಹಾಕಿ ಬಲಾತ್ಕಾರ ಮಾಡಿ ಅತ್ಯಾಚಾರ ಮಾಡಿದ್ದಾನೆ ಎಂದು ಕಾಲೇಜು ವಿದ್ಯಾರ್ಥಿನಿ ದೂರು ನೀಡಿದ್ದಾಳೆ.
ಕಳೆದ ಒಂದು ವರ್ಷದಿಂದ ಯುವತಿ ಬಿಸಿರೋಡು ಸಂಬಂಧಿಕರ ಮನೆಯಿಂದ ಕಾಲೇಜು ಹೋಗುತ್ತಿದ್ದು ಅಲ್ಲೇ ಆರೋಪಿ ಪುರುಷೋತ್ತಮ ಕೂಡ ವಾಸವಾಗಿದ್ದ, ಅವಾಗಿಂದಲೇ ಆರೋಪಿ ವಿದ್ಯಾರ್ಥಿ ನಿಗೆ ಬೆದರಿಕೆ ಹಾಕಿ ಅವಳ ಮೇಲೆ ನಿರಂತರವಾಗಿ ಅತ್ಯಾಚಾರ ಮಾಡುತ್ತಲೇ ಬಂದಿದ್ದ ಎಂದು ಆರೋಪಿಸಲಾಗಿದೆ.ಮನೆಯವರಿಗೆ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ ಮನೆಯವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ ಈತನ ಟಾರ್ಚ್ ರ್ ತಡೆಯಲಾಗದೆ ಸಂತೃಸ್ತೆ ಮನೆಯವರಿಗೆ ತಿಳಿಸಿ ಠಾಣೆಗೆ ದೂರು ನೀಡಿದ್ದಾಳೆ.
ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಯುವತಿ ದೂರಿನಂತೆ ಅತ್ಯಾಚಾರ ಪ್ರಕರಣ ದಾಖಲಾಗಿದೆ.