ಮಂಗಳೂರು : ದ.ಕ.ಜಿಲ್ಲೆಯಲ್ಲಿ ಇಂದು 536 ಮಂದಿಗೆ ಕೊರೋನಾ ಪಾಸಿಟಿವ್ ಆಗಿರುವ ಬಗ್ಗೆ ವರದಿಯಾಗಿದೆ.
ಬಂಟ್ವಾಳ ತಾಲೂಕಿನಲ್ಲಿ ಇಂದು 50 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಪಾಸಿಟಿವ್ ಇಳಿಕೆಯಗುತ್ತಾ ಬರುತ್ತಿದ್ದರೂ ಕೂಡ ಸಾವಿನ ಸಂಖ್ಯೆ ಮಾತ್ರ ಹೆಚ್ಚಳವಾಗುತ್ತಿರುವುದು ಆತಂಕದ ವಿಚಾರವಾಗಿದೆ.
ದ.ಕ ಜಿಲ್ಲೆಯಲ್ಲಿ ಇಂದು ಕೊರೋನಾ ಮಹಾಮಾರಿಗೆ ಸೊಂಕಿಗೆ ಐವರು ಮಂದಿ ಬಲಿಯಾಗಿದ್ದಾರೆ.
ಕೊರೋನಾ ಮಹಾಮಾರಿಗೆ ಜಿಲ್ಲೆಯಲ್ಲಿ ಈವರೆಗೆ ಬಲಿಯಾದವರ ಸಂಖ್ಯೆ 918 ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಇಂದು 536 ಮಂದಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಸ್ಟೇ ಹೋಮ್ ಸ್ಟೇ ಸೇಫ್ ಎಂಬ ಮಾತನ್ನು ಅಕ್ಷರಶ ಪಾಲಿಸಬೇಕಾದ ಅನಿವಾರ್ಯತೆ ಇದೆ .
ಅದೇ ರೀತಿ ಇಂದು 1,172 ಮಂದಿ ಕೊರೋನಾದಿಂದ ಗುಣಮುಖರಾಗಿರುವ ಖುಷಿ ಯ ವಿಚಾರ ಕೂಡ ಇದೆ.
ಜಿಲ್ಲೆಯಲ್ಲಿ ಒಟ್ಟು 8,492 ಸಕ್ರೀಯ ಕೊರೊನಾ ಸೊಂಕಿತರು ಇದ್ದು , ಈವರೆಗೆ ಒಟ್ಟು 76,735 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.