ಬಂಟ್ವಾಳ: ಕೋವಿಡ್ ನಿಯಮಾವಳಿ , ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿ ಮೆಲ್ಕಾರ್ ನಲ್ಲಿ ವ್ಯಾಪಾರ ವಹಿವಾಟು ಮಾಡುತ್ತಿದ್ದ ಅಂಗಡಿ ಮಾಲಕನ ಮೇಲೆ ಪ್ರಕರಣ ದಾಖಲಾದ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಲ್ಲಿ ನಡೆದಿದೆ.
ಪಲ್ಲಮಜಲು ನಿವಾಸಿ ಅಬ್ದುಲ್ ಜಬ್ಬಾರ್ ಅವರಿಗೆ ಸೇರಿದ ಹಾರ್ಡವೇರ್ ಅಂಗಡಿ ನಿಯಮ ಮೀರಿ ವ್ಯಾಪರ ಮಾಡುತ್ತಿದ್ದರು ಎಂದು ಪ್ರಕರಣ ದಾಖಲಾಗಿದೆ.
ಕೋವಿಡ್ ನಿಯಾಮವಳಿಯನ್ನು ಗಣನೆಗೆ ತೆಗೆದುಕೊಳ್ಳದೆ
ಬಂಟ್ವಾಳ ನಗರ ಠಾಣಾ ಎಸ್.ಐ.ಅವಿನಾಶ್ ಅವರು ರೌಂಡ್ಸ್ ನಲ್ಲಿರುವ ವೇಳೆ ಬೆಳಿಗ್ಗೆ 10.30 ಗಂಟೆಗೆ ಪಾಣೆಮಂಗಳೂರು ಗ್ರಾಮದ ಮೆಲ್ಕಾರ್ ಎಂಬಲ್ಲಿ NEW M3 HARDWARE & ELECRICALS ಅಂಗಡಿಯ ಮಾಲೀಕನು ಅಂಗಡಿಯನ್ನು ತೆರೆದು ಸಾಮಾಜಿಕ ಅಂತರವನ್ನು ಕಾಪಾಡದೇ ವ್ಯಾಪಾರವನ್ನು ಮಾಡುತ್ತಿದ್ದರು.
ಹಾರ್ಡ್ ವೇರ್ ಅಂಗಡಿಯಲ್ಲಿ ಮಾಲೀಕರಾದ ಅಬ್ದುಲ್ ಜಬ್ಬಾರ್ ರವರು ಸಾಮಾಜಿಕ ಅಂತರವನ್ನು ಕಾಪಾಡದೇ ಸರಕಾರದ ನಿಷೇದಾಜ್ಞೇಯನ್ನು ಉಲ್ಲಂಘಿಸಿ ವ್ಯಾಪಾರ ಮಾಡಿ ಅಪರಾಧವೆಸಗಿರುತ್ತಾರೆ ಎಂದು ಅವರ ಮೇಲೆ
ಕರ್ನಾಟಕ ಸಾಂಕ್ರಾಮಿಕ ರೋಗಗಳ ಆಧ್ಯಾದೇಶ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.