ಪುಣಚ: ತಂದೆ ಮರಣ ಹೊಂದಿದ ಕೆಲವೇ ಗಂಟೆಗಳಲ್ಲಿ ಮಗ ಹೃದಯಾಘಾತದಿಂದ ಮೃತಪಟ್ಟ ಘಟನೆ ಪುಣಚ ಗ್ರಾಮದ ಬೈಲುಗುತ್ತಿನಲ್ಲಿ ನಡೆದಿದೆ.
ಪುಣಚ ಗ್ರಾಮದ ಬೈಲುಗುತ್ತು ಕೊಪ್ಪಳ ನಿವಾಸಿ ನಿವೃತ್ತ ಕೆ.ಪಿ.ಟಿ ಪ್ರೊಫೆಸರ್ ಭುಜಂಗ ಶೆಟ್ಟಿ ರವರು ಕೋವಿಡ್ ನಿಂದಾಗಿ ಮರಣ ಹೊಂದಿದ್ದರು, ತಂದೆಯ ಅಂತ್ಯಕ್ರಿಯೆ ಸಂದರ್ಭ ಶೈಲೇಶ್ ರವರು ಕುಸಿದು ಬಿದ್ದ ಕಾರಣ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು ಎಂದು ವರದಿಯಾಗಿದೆ.