ವಿಜ್ಞಾನ ಮತ್ತು ತಂತ್ರಜ್ಞಾನ ಇಂದಿನ ಯುಗದಲ್ಲಿ ಮಹತ್ವವಾದ ಸ್ಥಾನ ಪಡೆದಿದೆ. ದೇಶದ ವಿಜ್ಞಾನ-ತಂತ್ರಜ್ಞಾನ ಕ್ಷೇತ್ರಕ್ಕೆ ಕೊಡುಗೆ ನೀಡಲು ಎಲ್ಲರಿಗೂ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ ಕನ್ನಡ ಸೇರಿದಂತೆ ಪ್ರಾದೇಶಿಕ ಭಾಷೆಗಳಲ್ಲಿ ಇಂಜಿನಿಯರಿಂಗ್ ಕೋರ್ಸ್ ಗಳನ್ನು ೨೦೨೦-೨೧ನೇ ಶೈಕ್ಷಣಿಕ ಸಾಲಿನಿಂದ ಪ್ರಾರಂಭಿಸಲು ಅನುಮತಿ ನೀಡಿರುವುದನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸ್ವಾಗತಿಸುತ್ತದೆ.
ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇದು ಅನುಕೂಲಕರವಾಗಿದೆ. ಇಲ್ಲಿಯವರೆಗೆ ಕೇವಲ ನಗರ ಪ್ರದೇಶದ ವಿದ್ಯಾರ್ಥಿಗಳು ಹೆಚ್ಚು ಇಂಜಿನಿಯರಿAಗ್ ವ್ಯಾಸಂಗ ಮಾಡುತ್ತಿದ್ದರು ಆದರೆ ಇನ್ನು ಮುಂದೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಇಂಜಿನಿಯರಿಂಗ್ ವ್ಯಾಸಂಗ ಮಾಡಲು ಇದು ಪ್ರೋತ್ಸಾಹಕರವಾಗಲಿದೆ. ಕನ್ನಡ ಭಾಷೆಯಲ್ಲಿ ವ್ಯಾಸಂಗ ಮಾಡುವ ವಿಷಯ ಕೇವಲ ಅನುಮತಿ ಹಂತದಲ್ಲಿ ನಿಲ್ಲದೆ ಇದನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಸರ್ಕಾರ ವಿಶೇಷವಾಗಿ ವಿಟಿಯು ಪಠ್ಯಪುಸ್ತಕಗಳ ಮತ್ತು ಇತರೆ ಪಠ್ಯಕ್ಕೆ ಸಹಾಯವಾಗುವ ಅನುವಾದಗಳನ್ನು ಶೀಘ್ರಗತಿಯಲ್ಲಿ ಮಾಡಬೇಕಿದೆ ಮತ್ತು ಸರಿಯಾದ ತಯಾರಿಯ ಜೊತೆಯಲ್ಲಿ ಪಠ್ಯಪುಸ್ತಕಗಳ (ಅನುವಾದಿತ) ಯಾವುದೇ ಕೊರತೆಯಾಗದಂತೆ ನಿಗಾವಹಿಸಬೇಕೆಂದು ಮತ್ತು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಜ್ಞರ ಸಮಿತಿ ರಚಿಸಿ ಕನ್ನಡದಲ್ಲಿ ಇಂಜಿನಿಯರಿಂಗ್ ವ್ಯಾಸಂಗಕ್ಕೆ ಬೇಕಾದ ಎಲ್ಲಾ ರೀತಿಯ ವ್ಯವಸ್ಥೆಯನ್ನು ಮಾಡಲು ಕ್ರಮ ಕೈಗೊಳ್ಳಬೇಕೆಂದು ಎಬಿವಿಪಿ ಸಲಹೆ ನೀಡುತ್ತದೆ. ABVP ರಾಜ್ಯ ಕಾರ್ಯದರ್ಶಿ ಪ್ರತೀಕ್ ಮಾಳಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ವಂದನೆಗಳೊಂದಿಗೆ
ಮಣಿಕಂಠ ಕಳಸ
ರಾಜ್ಯ ಸಹಕಾರ್ಯದರ್ಶಿ
ABVP ಕರ್ನಾಟಕ