ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ ಕೊಳ್ನಾಡು ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಕೊಳ್ನಾಡು ಗ್ರಾಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಮ್ ಎಸ್ ಮೊಹಮ್ಮದ್,ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಂಚಾಯತ್ ಅಧ್ಯಕ್ಷರಾದ ನೆಬಿಸ ಖಾದರ್, ಪಂಚಾಯತ್ ಉಪಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿ,ವಲಯ ಅಧ್ಯಕ್ಷರಾದ ಅದ್ಭುಲ್ ಖಾದರ್ ಮೂಸ, ಮಾಜಿ ವಲಯ ಅಧ್ಯಕ್ಷರಾದ ಬಾಪಾ ಕುಂಇಿ ಮೊದಲಾದವರು ಉಪಸ್ಥಿತರಿದ್ದರು.