Sunday, April 7, 2024

*ಹಿಂದೂ ದೇವಾಲಯಗಳ ಹಣ ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ. ತಡೆಹಿಡಿಯಲು ಸಚಿವ ಕೋಟ ಆದೇಶ*

ಇತ್ತೀಚೆಗೆ ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ, ರಾಜ್ಯ ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಾಧ್ಯಮದ ಮೂಲಕ ಹೇಳಿಕೆಯೊಂದನ್ನು ನೀಡಿದ್ದು, ರಾಜ್ಯದಲ್ಲಿ ನಮ್ಮ ಸರಕಾರ ಬರುವ ಮುಂಚೆ ಇಲಾಖೆಯ ಮೂಲಕ ಮಂಜೂರಾಗುತ್ತಿರುವ ತಸ್ತೀಕ್ ಹಣ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಕೂಡ ಬಿಡುಗಡೆ ಮಾಡುತ್ತಿರುವ ಬಗ್ಗೆ ಮಾಹಿತಿ ಒದಗಿದ್ದು, ತಕ್ಷಣ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಮೂಲಕ ಹಿಂದೂ ಧರ್ಮವನ್ನು ಹೊರತುಪಡಿಸಿ ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದನ್ನು ತಡೆಹಿಡಿಯಲು ಸೂಚಿಸಿದ್ದಾರೆ. ಇತರೆ ಯಾವುದೇ ಧರ್ಮದ ಧಾರ್ಮಿಕ ಕೇಂದ್ರಗಳಿಗೆ ಹಣದ ಅವಶ್ಯಕತೆಯಿದ್ದಲ್ಲಿ, ಆಯಾಯ ಇಲಾಖೆಯ ಜವಾಬ್ದಾರಿ ಹಾಗೂ ಆಯಾ ಇಲಾಖೆಯ ಹಣ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗುವುದು ಎಂದವರು ತಿಳಿಸಿದ್ದಾರೆ.

ರಾಜ್ಯದಲ್ಲಿ 27ಸಾವಿರಕ್ಕೂ ಹೆಚ್ಚು ಹಿಂದೂ ದೇವಸ್ಥಾನಗಳಿಗೆ ತಸ್ತೀಕ್ ನೀಡಲಾಗುತ್ತಿದ್ದು, ಸುಮಾರು 133 ಕೋಟಿ ರೂಪಾಯಿ ಸರಕಾರ ವಾರ್ಷಿಕ ಅನುದಾನ ಹಂಚುತ್ತಿದೆ. ಈ ಪೈಕಿ ಸುಮಾರು 764 ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳು ಇಲಾಖೆಯಿಂದ ತಸ್ತೀಕ್ ಪಡೆಯುತ್ತಿದ್ದು, ಮಂತ್ರಿಗಳ ಸೂಚನೆ ಮೇರೆಗೆ ಅನ್ಯ ಧರ್ಮೀಯ ಪ್ರಾರ್ಥನಾ ಮಂದಿರಗಳಿಗೆ ಹಣ ಬಿಡುಗಡೆ ಮಾಡುವುದನ್ನು ನಿಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರು ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

More from the blog

ಪ್ರಶಾಂತ್ ಪುಂಜಾಲಕಟ್ಟೆ ಅವರಿಗೆ ಪಿತೃ ವಿಯೋಗ

ಬಂಟ್ವಾಳ: ನಮ್ಮ ಬಂಟ್ವಾಳ ಸಮೂಹ ಸಂಸ್ಥೆಯ ಮಾಲಕರಾದ ಪ್ರಶಾಂತ್ ಪುಂಜಾಲಕಟ್ಟೆ ಅವರ ತೀರ್ಥರೂಪರು, ಕುಕ್ಕಳ ಗ್ರಾಮದ ಪುಂಜಾಲಕಟ್ಟೆ ನಿವಾಸಿ ಸಂಜೀವ ಪೂಜಾರಿ( 83) ಅವರು ಅಲ್ಪಕಾಲದ ಅಸೌಖ್ಯದಿಂದ ಎ.6ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...

ಬಂಟ್ವಾಳ: ನಿಯಮ ಮೀರಿ ಚಾಲನೆ ಮಾಡಿ ಪೋಲೀಸರ ಕೈಗೆ ಸಿಕ್ಕಿಬಿದ್ದರೆ ದಂಡ ಗ್ಯಾರಂಟಿ….

ಬಂಟ್ವಾಳ: ರಸ್ತೆಯಲ್ಲಿ ಟ್ರಾಫಿಕ್ ಪೋಲೀಸರು ದಂಡ ವಸೂಲಿ ಮಾಡುವ ವೇಳೆ ಸುಳ್ಳು ಹೇಳಿಬಚಾವಾಗಲು ಸಾಧ್ಯವಿಲ್ಲ, ಜೊತೆಗೆ ಅಸಭ್ಯ ವರ್ತನೆ ಮಾಡಿದರೆ ಜೋಕೆ, ಅವರ ಶರೀರದಲ್ಲಿ ಕಣ್ಗಾವಲು ಕ್ಯಾಮರಾ ಅಳವಡಿಸಿಲಾಗಿದ್ದು, ಸೂಕ್ಷ್ಮವಾಗಿ ಎಲ್ಲವನ್ನು ಸೆರೆ...

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ : ಚೆಂಡಿನ ಗದ್ದೆಯಲ್ಲಿ ಪ್ರಥಮ ಚೆಂಡು

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ದೇವಳದ ಚೆಂಡಿನ ಗದ್ದೆಯಲ್ಲಿ ಇಂದು ಪ್ರಥಮ ಚೆಂಡು ನಡೆಯಿತು. ‌ ಇವತ್ತಿನಿಂದ ಮುಂದಿನ ಐದು ದಿನಗಳ ಕಾಲ ಇಲ್ಲಿ ಚೆಂಡು...

ಏಪ್ರಿಲ್ 7ರಂದು ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ

ಬಂಟ್ವಾಳ: ಏಪ್ರಿಲ್ 7ರಂದು ಅಪರಾಹ್ನ 3 ಗಂಟೆಗೆ ಬಿ.ಸಿ.ರೋಡು ರಂಗೋಲಿ ಸಭಾಂಗಣದಲ್ಲಿ ಕರ್ನಾಟಕ ಜಾನಪದ ಪರಿಷತ್ತು ದ.ಕ.ಜಿಲ್ಲಾ ಬಂಟ್ವಾಳ ತಾಲೂಕು ಘಟಕದ ಉದ್ಘಾಟನೆ ಹಾಗೂ ಪದಗ್ರಹಣ ಸಮಾರಂಭ ನಡೆಯಲಿದೆ ಎಂದು ತಾಲೂಕು ಘಟಕದ...