ಕರ್ನಾಟಕ ಸಾರಿಗೆ ಇಲಾಖೆ ಇನ್ಮುಂದೆ ಕೆಎಸ್ಆರ್ಟಿಸಿ ಟ್ರೇಟ್ ಮಾರ್ಕ್ ಬಳುಸುವಂತಿಲ್ಲ ಎಂದು ಕೇಂದ್ರ ಟ್ರೇಡ್ ಮಾರ್ಕ್ಗಳ ರಿಜಿಸ್ಟರ್ ಆದೇಶ ಹೊರಡಿಸಿದೆ. ಸದ್ಯ ಕೆಎಸ್ಆರ್ಸಿ ಪದ ಕೇರಳದ ಪಾಲಾಗಿದೆ.
ಕರ್ನಾಟಕ ಮತ್ತು ಕೇರಳ ಎರಡೂ ರಾಜ್ಯದ ಸಾರಿಗೆ ಸಂಸ್ಥೆ ಬಸ್ಗಳು ಕೆಎಸ್ಆರ್ಟಿಸಿ ಟ್ರೇಡ್ ಮಾರ್ಕ್ ಬಳಸುತ್ತಿದ್ದವು. ಆದ್ರೆ ಈ ಬಗ್ಗೆ 2014ರಲ್ಲಿ ಕೇರಳಕ್ಕೆ ಈ ಟ್ರೇಡ್ ಮಾರ್ಕ್ ಬಳಸದಂತೆ ಕರ್ನಾಟಕ ಸೂಚಿಸಿತ್ತು. ಅಲ್ಲದೇ ಕೇರಳಕ್ಕೆ ನೋಟಿಸ್ ಕೂಡ ಜಾರಿ ಮಾಡಿತ್ತು. ಹೀಗಾಗಿ ಈ ಬಗ್ಗೆ ಕೇರಳ ಸರ್ಕಾರ, ಕೇಂದ್ರ ಸರ್ಕಾರದ ಅಧೀನದ ಟ್ರೇಡ್ ಮಾರ್ಕ್ಗಳ ರಿಜಿಸ್ಟರ್ಗೆ ಅರ್ಜಿ ಸಲ್ಲಿಸಿತ್ತು. ಸತತ 8 ವರ್ಷಗಳ ಕಾಲ ಎರಡೂ ರಾಜ್ಯಗಳು ಟ್ರೇಕ್ ಮಾರ್ಕ್ಗಾಗಿ ತಿಕ್ಕಾಟ ನಡೆಸಿದ್ದು, ಕೊನೆಗೆ ಅಂತಿಮವಾಗಿ ಕೇರಳಕ್ಕೆ ಕೆಎಸ್ಆರ್ಟಿಸಿ ನೀಡಿ ಟ್ರೇಡ್ ಮಾರ್ಕ್ಗಳ ರಿಜಿಸ್ಟರ್ ಆದೇಶ ಹೊರಡಿಸಿದೆ.
ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಂಡಿ ಶಿವಯೋಗಿ ಕಳಸದ್ ಮಾಹಿತಿ ನೀಡಿದ್ದು, ಸದ್ಯ ಇದು ನಮ್ಮ ಗಮನಕ್ಕೆ ಬಂದಿದೆ. ಆದ್ರೆ ನಮಗೆ ಯಾವುದೇ ಅಧಿಕೃತ ಆದೇಶ ಬಂದಿಲ್ಲ. ಅಧಿಕೃತ ಆದೇಶ ಕೈಸೇರಿದ ಬಳಿಕ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕಾನೂನಿನಡಿ ಮುಂದೆ ಹೇಗೆ ಹೋರಾಟ ಮಾಡಬೇಕು ಅನ್ನೋದನ್ನ ತೀರ್ಮಾನ ಮಾಡುತ್ತೇವೆ. ನಾವು ಕಾನೂನು ತಜ್ಞರ ಜೊತೆ ಚರ್ಚಿನಿ ಮುಂದಿನ ನಿರ್ಣಯ ಕೈಗೊಳ್ತೇವೆ ಎಂದಿದ್ದಾರೆ.