ಜೂನ್ 7 ರ ನಂತರವೂ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದು ಸಂಜೆ ವೇಳೆ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ನಡೆಯುವ ಸಭೆಯಲ್ಲಿ ಈ ಬಗ್ಗೆ ನಿಧಾ೯ರ ತೆಗೆದು ಕೊಳ್ಳುವ ಸಾಧ್ಯತೆಗಳಿವೆ .
ರಾಜ್ಯದಲ್ಲಿ ಕೊರೊನಾ ಸೊಂಕು ನಿಯಂತ್ರಣದ ಹಿನ್ನೆಲೆಯಲ್ಲಿ
ಎಷ್ಟು ದಿನ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂಬ ಬಗ್ಗೆ ಸಭೆಯಲ್ಲಿ ಅಧಿಕಾರಿಗಳು ಹಾಗೂ ಸಚಿವರ ಜೊತೆ ಚರ್ಚಿಸಿ ತೀಮಾ೯ನ ಮಾಡುವ ಸಾಧ್ಯ ತೆ.
ಇನ್ನೂ ಕೆಲವು ಜಿಲ್ಲೆಗಳಲ್ಲಿ ಕೋರೋನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಸಕಾ೯ರದಿಂದ ಲಾಕ್ ಡೌನ್ ವಿಸ್ತರಣೆಗೆ ನಿಧಾ೯ರ ಮಾಡಲಾಗಿದೆ ಎನ್ನಲಾಗಿದೆ.
ಜೂನ್ 7 ರ ನಂತರ ಘೋಷಣೆ ಮಾಡುವ ಲಾಕ್ ಡೌನ್ ನಲ್ಲಿ ಕೆಲವು ವಿನಾಯಿತಿ ಘೋಷಣೆ ಮಾಡುವ ಸಾಧ್ಯತೆಗಳು ಹೆಚ್ಚಿವೆ.
ಗ್ರಾಮೀಣ ಪ್ರದೇಶಗಳಲ್ಲಿ ಕೋರೋನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಲಾಕ್ ಡೌನ್ ವಿಸ್ತರಣೆಗೆ ತಜ್ಞರ ಸಮಿತಿ ಸಲಹೆ ನೀಡಿದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ಇದನ್ನು ಪಾಲಿಸಲು ಸಕಾ೯ರದ ನಿಧಾ೯ರ ಮಾಡಿದ್ದು ಎಲ್ಲವೂ ಸಭೆಯ ಬಳಿಕ ಗೊತ್ತಾಗಲಿದೆ.