ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ, ಕೋವಿಡ್ ಪಾಸಿಟಿವ್ ಬಂದ ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ಇಂದು ಮಾಣಿ ಗ್ರಾಮದಲ್ಲಿ ಈ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಆಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರುಗಳಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಪ್ರಮುಖರಾದ ರಾಜ್ ಕಮಲ್ ಹೆಗ್ಡೆ, ಅಬ್ದುಲ್ ಅಜೀಜ್, ಜಗದೀಶ್ ಜೈನ್, ನಾಗರಾಜ ಪೂಜಾರಿ, ಹನೀಫ್, ಮಜೀದ್, ಅಜೀಜ್, ಯುವ ಕಾಂಗ್ರೆಸ್ ಅಧ್ಯಕ್ಷ ವಿಕೇಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.