Monday, April 15, 2024

ಮುಂಗಾರು ಮಳೆ ಆರಂಭ. ಕೃಷಿ ಪೂರಕ ಚಟುವಟಿಕೆ ಆರಂಭ. ಲಾಕ್ ಡೌನ್ ಮಧ್ಯೆಯೂ ಕೃಷಿ ಚಟುವಟಿಕೆಗಳು ನಿರಂತರ

ಬಂಟ್ವಾಳ : ದ.ಕ.ಜಿಲ್ಲೆಯಲ್ಲಿ ಶುರುವಾಯಿತು ಮುಂಗಾರು ಮಳೆ, ಗುರುವಾರ ರಾತ್ರಿ ಯಿಂದಲೇ ಮಳೆ ಆರಂಭವಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಯಂತೆ ಎರಡು ದಿನಗಳ ವಿಳಂಬದ ಬಳಿಕ ನೈರುತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ.

ದಕ್ಷಿಣ ಅರಬ್ಬಿ ಸಮುದ್ರ ಮತ್ತು ಕೇಂದ್ರ ಅರಬ್ಬಿ ಸಮುದ್ರ, ಲಕ್ಷದ್ವೀಪ, ತಮಿಳುನಾಡಿನ ಕೆಲವು ಭಾಗಗಳು, ಪುದುಚೇರಿ, ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡು, ರಾಯಲಸೀಮಾ ಹಾಗೂ ದಕ್ಷಿಣ ಮತ್ತು ಕೇಂದ್ರ ಬಂಗಾಳ ಕೊಲ್ಲಿಯಲ್ಲಿ ಮುಂದಿನ ಎರಡು ದಿನಗಳಲ್ಲಿ ನೈರುತ್ಯ ಮುಂಗಾರು ಪ್ರವೇಶಿಸಲಿದೆ ಎಂದು ತಿಳಿಸಿದೆ.

ವಾಡಿಕೆಯಂತೆ ಜೂನ್‌ 1ರಂದು ಮುಂಗಾರು ಮಾರುತಗಳು ಕೇರಳ ಪ್ರವೇಶಿಸುತ್ತವೆ.

ಈ ಮಾರುತಗಳಿಂದಾಗಿ ಜೂನ್‌ನಿಂದ ಸೆಪ್ಟೆಂಬರ್‌ ವರೆಗೆ ದೇಶದ ಬಹುತೇಕ ಭಾಗಕ್ಕೆ ಮಳೆಯಾಗುತ್ತದೆ. ಆದರೆ, ಈ ಬಾರಿ ಎರಡು ದಿನ ತಡವಾಗಿದೆ.

ಕಳೆದ ಒಂದು ತಿಂಗಳ ಹಿಂದೆ ಅಂದರೆ ಮೇ ತಿಂಗಳಿನಲ್ಲಿ ಸಾಕಷ್ಟು ಮಳೆ ಬಂದಿದ್ದು ನೀರಿಗೆ ಯಾವುದೇ ಸಮಸ್ಯೆ ಉಂಟಾಗಿರಲಿಲ್ಲ.

ಈ ಮೇ ತಿಂಗಳ ಮಳೆಯಿಂದ ರೈತ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುಕೂಲವಾಗಿತ್ತು.

ಕೇರಳಕ್ಕೆ ನೈರುತ್ಯ ಮುಂಗಾರು ಪ್ರವೇಶಿಸಿದೆ ಎಂದು ಘೋಷಿಸಲು ವಿವಿಧ ಮಾನದಂಡಗಳನ್ನು ಅನುಸರಿಸಲಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆ ಗುರುತಿಸಿರುವ 14 ಸ್ಥಳಗಳ ಪೈಕಿ ಶೇಕಡ 60ರಷ್ಟರಲ್ಲಿ ಮೇ 10ರ ಬಳಿಕ ಸತತ ಎರಡು ದಿನಗಳ ಕಾಲ 2.5 ಮಿಲಿ ಮೀಟರ್‌ ಅಥವಾ ಹೆಚ್ಚು ಮಳೆಯಾಗಿರಬೇಕು. ಜತೆಗೆ ಗಾಳಿಯ ವೇಗ ಪರಿಗಣಿಸಲಾಗುತ್ತದೆ. ಈ ರೀತಿಯ ವಿವಿಧ ಅಂಶಗಳನ್ನು ವಿಶ್ಲೇಷಿಸಿದ ಬಳಿಕವೇ ಮುಂಗಾರು ಪ್ರವೇಶದ ಬಗ್ಗೆ ಘೋಷಿಸಲಾಗುತ್ತದೆ ಎಂದು ತಿಳಿಸಿದೆ.

ಈ ಋತುವಿನಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯ ಅಥವಾ ಅದಕ್ಕಿಂತಲೂ ಹೆಚ್ಚು ಮಳೆಯಾಗಲಿದೆ. ಆದರೆ, ಪೂರ್ವ ಮತ್ತು ಈಶಾನ್ಯ ಭಾರತ ಹಾಗೂ ಕರಾವಳಿ ಕರ್ನಾಟಕದ ಕೆಲವು ಭಾಗಗಳಲ್ಲಿ ಸಾಮಾನ್ಯಕ್ಕಿಂತಲೂ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

More from the blog

ಹಿಂದುಳಿದ ವರ್ಗದ ಶ್ರೇಯೋಭಿವೃದ್ಧಿಗಾಗಿ ಕೆಲಸ- ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ

ಸುರತ್ಕಲ್: ರಾಜಕೀಯವಾಗಿ ಸಿಕ್ಕ ಅವಕಾಶವನ್ನು ಸಾಮಾಜಿಕ ಶ್ರೇಯೋಭಿವೃದ್ಧಿಗೆ ಬಳಸಿಕೊಳ್ಳಲಾಗುವುದು ಎಂದು ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಹೇಳಿದರು. ಪಣಂಬೂರು ಸುಂದರಿ ಲಕ್ಷ್ಮಣ್ ಬಂಗೇರ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ...

ಹಿರಿಯ ಮತ್ತು ಅಂಗವಿಕಲ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ ಕಾರ್ಯ ಪ್ರಾರಂಭ

ಲೋಕಸಭಾ ಚುನಾವಣೆ 2024 ಕ್ಕೆ ಸಂಬಂಧಿಸಿದಂತೆ 205-ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 85 ವರ್ಷಕ್ಕೆ ಮೇಲ್ಪಟ್ಟ ಮತ್ತು ಶೇಕಡಾ 40 ಕ್ಕಿಂತ ಜಾಸ್ತಿ ಅಂಗವೈಕಲ್ಯತೆ ಹೊಂದಿರುವ ಮತದಾರರ ಮನೆಗಳಿಗೆ ತೆರಳಿ ಮತದಾನ ಪ್ರಕ್ರಿಯೆ ನಡೆಸುವ...

ಉಳ್ಳಾಲದಲ್ಲಿ ರಾರಾಜಿಸಿದ ಕಾಂಗ್ರೆಸ್ ರೋಡ್ ಶೋ… ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರಿಗೆ ಅಭೂತಪೂರ್ವ ಬೆಂಬಲ ವ್ಯಕ್ತಪಡಿಸಿದ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದ ಜನತೆ

ಉಳ್ಳಾಲ: ರೋಡ್ ಶೋ ಮೂಲಕ ನಡೆಸಿದ ಚುನಾವಣಾ ಪ್ರಚಾರ ಕಾರ್ಯ ಕಾಂಗ್ರೆಸ್'ಗೆ ಹೊಸ ಉತ್ಸಾಹ ತುಂಬುವಲ್ಲಿ ಸಫಲವಾಗಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸಿದ್ದು, ಅಭೂತಪೂರ್ವ...

ಪುಣಚ: ನಿರ್ಮಾಣ ಹಂತದ ಸೇತುವೆ ಕುಸಿತ : 7 ಮಂದಿ ಕಾರ್ಮಿಕರಿಗೆ ಗಾಯ

ವಿಟ್ಲ: ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದು ಏಳು ಮಂದಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿಯಲ್ಲಿ ಸೇತುವೆಯ ಕೊನೆಯ...