Saturday, April 6, 2024

ಮಹಿಳಾ ಅಧಿಕಾರಿಗೆ ಬಿಜೆಪಿ ಮುಖಂಡನಿಂದ ನಿಂದನೆ

ಮಹಿಳಾ ಅಧಿಕಾರಿಯೊಬ್ಬರನ್ನು ‘ಕಾಂಗ್ರೆಸ್‌ನ ನಾಯಿ’ ಎಂದು ನಿಂದಿಸಿದ BJP ಮುಖಂಡ ಈಗ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ. ಇದೀಗ ಘಟನೆ ಸಂಬಂಧ ಟೀಕೆಯೂ ವ್ಯಕ್ತವಾಗಿದೆ.

ಮಂಗಳೂರು ಹೊರವಲಯದ ಮುಡಿಪು ಎಂಬಲ್ಲಿ ಘಟನೆ ನಡೆದಿದ್ದು, ಕರ್ನಾಟಕ ಜಲಮಂಡಳಿ ಇಂಜಿನಿಯರ್‌ಗೆ ಬಿಜೆಪಿ ಮುಖಂಡ ಅವಾಚ್ಯ ಶಬ್ದಗಳಿಂದ ಬೈದಿರುವ ಘಟನೆ ನಡೆದಿದೆ.

ಸ್ಥಳೀಯ ಬಿಜೆಪಿ ಮುಖಂಡ, ನ್ಯಾಯವಾದಿ ಅಸ್ಗರ್ ಮುಡಿಪು ಎಂಬಾತನಿಂದ ನಿಂದನೆ ನಡೆದಿದ್ದು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿ ತಡೆದು ಅಧಿಕಾರಿಗೆ ನಿಂದಿಸಿದ್ದಾರೆ.

ಕಾಮಗಾರಿ ಆರ್ಡರ್ ಕಾಪಿ ಕೊಟ್ಟು ಕೆಲಸ ಮಾಡಿ ಅಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಕಾಂಗ್ರೆಸ್ ನ ನೂರು ಮಂದಿಗೆ ಬಿಜೆಪಿಯ ಒಬ್ಬ ಸಾಕು ಅಂತ ಆವಾಜ್ ಹಾಕಿದ್ದಾರೆ.

ನೀವು ಕಾಂಗ್ರೆಸ್‌ನ ನಾಯಿ, ಎಂಜಲು ತಿಂದು ಸರ್ಕಾರಕ್ಕೆ ಕಪ್ಪುಚುಕ್ಕೆ ತಂದವರು. ಕಾಂಗ್ರೆಸ್ ನ ಒಬ್ಬ ನಾಯಿ ಇಲ್ಲಿ ಗುಂಡಿ ತೆಗೆದು ವಂಚನೆ ಮಾಡಿದ್ದಾನೆ ಎಂದು ಬೈಯ್ದಿದ್ದಾರೆ.

ನಾನು ಕೋರ್ಟ್‌ಗೆ ಹೋಗುತ್ತೇನೆ. ನೀವು ಕೇಸ್ ಕೊಡಿ ಏನಾದರೂ ಮಾಡಿ ಎಂದು ಆವಾಜ್ ಹಾಕಿದ್ದಾರೆ. ಅವಾಚ್ಯ ಶಬ್ದಗಳ ನಿಂದನೆ ಹಿನ್ನೆಲೆ ಕೊಣಾಜೆ ಠಾಣೆಯಲ್ಲಿ ಮಹಿಳಾ ಅಧಿಕಾರಿ ಪ್ರಕರಣ ದಾಖಲಿಸಿದ್ದಾರೆ. ಬೈಗುಳದ ವಿಡಿಯೋ ಸದ್ಯ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಮಂಗಳೂರು ಶಾಸಕ ಯು.ಟಿ.ಖಾದರ್ ಅನುದಾನದ ಕಾಮಗಾರಿ ಸಂಬಂಧ ಈ ಘಟನೆ ನಡೆದಿದೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...