ನಾಳೆಯಿಂದ ಮಂಗಳೂರಿನಲ್ಲಿ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ. ನಾಳೆಯಿಂದ ಮಂಗಳೂರಿನಲ್ಲಿ ಎಲ್ಲಾ ಅಂಗಡಿ-ಶಾಪ್ ತೆರೆಯಲು ಸರ್ಕಾರ ಅನುಮತಿ ನೀಡಲಾಗಿದೆ ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ಮಂಗಳೂರು ನಲ್ಲಿ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಅವರು ಈ ಆದೇಶ ನೀಡಿದ್ದಾರೆ. ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿ ತೆರೆಯಲು ಅನುಮತಿ ಸಿಕ್ಕಿದೆ ಎಂದು ಅವರು ತಿಳಿಸಿದ್ದಾರೆ. ಬೆ.7 ಗಂಟೆಯಿಂದ ಮ.2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಬಹುದು ಎಂದು ಅವರು ತಿಳಿಸಿದ್ದಾರೆ. ಆದರೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಿದ್ದಾರೆ. ಸಂಸದ ನಳಿನ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಯಿತು ಎಂದು ಸಚಿವರು ತಿಳಿಸಿದ್ದಾರೆ.