ಪುಂಜಾಲಕಟ್ಟೆ ಜೂ.6: ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು
ಇದರ ವತಿಯಿಂದ ಕೊರೊನ ಮಹಾಮಾರಿಯಿಂದ ಸಂಕಷ್ಟಕ್ಕೊಳಗಾದ ಯಕ್ಷಗಾನ ಕಲಾವಿದರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಫೌಂಡೇಶನ್ ಸ್ಥಾಪಕ ಪಟ್ಲ ಸತೀಶ್ ಶೆಟ್ಟಿ ಅವರ ಮಾರ್ಗದರ್ಶನ ದಲ್ಲಿ
ಫೌಂಡೇಶನ್ ನ
ಪುಂಜಾಲಕಟ್ಟೆ ಘಟಕದ ವ್ಯಾಪ್ತಿಯ ವಿವಿಧೆಡೆ ಯ ಆಯ್ದ ಯಕ್ಷಗಾನ ಕಲಾವಿದರಿಗೆ ಆಹಾರ ಕಿಟ್ ವಿತರಣೆ ಕಾರ್ಯಕ್ರಮ ರವಿವಾರ ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಸಭಾಂಗಣದಲ್ಲಿ ಜರಗಿತು.
ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಕಿಟ್ ವಿತರಿಸಿ ಮಾತನಾಡಿ, ಕೊರೊನಾ ಮಹಾಮಾರಿ ಯಿಂದ ಯಕ್ಷಗಾನ ಕಲಾವಿದರು ಸಂಕಷ್ಟಕ್ಕೀಡಾಗಿದ್ದಾರೆ. ಈ ಸಂದರ್ಭದಲ್ಲಿ ಯಕ್ಷಗಾನ ಕಲಾವಿದರ ಅಭ್ಯುದಯಕ್ಕೆ ಬೆನ್ನೆಲುಬಾಗಿ ನಿಂತಿರುವ ಯಕ್ಷಧ್ರುವ ಪಟ್ಲ ಫೌಂಡೇಶನ್ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಫೌಂಡೇಶನ್ ಪುಂಜಾಲಕಟ್ಟೆ ಘಟಕದ ಅಧ್ಯಕ್ಷ ಪುರುಷೋತ್ತಮ ಪೂಜಾರಿ ಬೊಳೆಕಿನಕೋಡಿ,ಮಹಿಳಾ ಘಟಕದ ಅಧ್ಯಕ್ಷೆ ತುಳಸಿ ಹಾರಬೆ, ಗೌರವಾಧ್ಯಕ್ಷೆ ಲಕ್ಷ್ಮೀ ಸಂಜೀವ ಶೆಟ್ಟಿ ಮುಗೆರೋಡಿ, ಪಿಲಾತಬೆಟ್ಟು ಗ್ರಾ. ಪಂ. ಮಾಜಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಘಟಕ ಸಂಚಾಲಕ ರಮೇಶ್ ಶೆಟ್ಟಿ ಮಜಲೋಡಿ, ಶ್ರೀ ಮುರುಘೇಂದ್ರ ವನಿತಾ ಸಮಾಜ ಅಧ್ಯಕ್ಷೆ ಆಶಾ ದಿನಕರ್ ಶೆಟ್ಟಿ ಹಾಗೂ ಘಟಕ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು , ಕಲಾವಿದರು ಭಾಗವಹಿಸಿದ್ದರು.
ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ , ಕಾವಳಕಟ್ಟೆ ಪ್ರಸ್ತಾವಿಸಿದರು.
ಶ್ರೀ ಮುರುಘೇಂದ್ರ ಮಿತ್ರ ಮಂಡಳಿ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು , ಪ್ರಭಾಕರ ಪಿ.ಎಂ. ಸ್ವಾಗತಿಸಿದರು.
ಹಿರಿಯ ಯಕ್ಷಗಾನ ಕಲಾವಿದ
ವಿಷ್ಣುಶರ್ಮ ವಾಟೆಪಡ್ಪು ಅವರು ಕಲಾವಿದರ ಪರವಾಗಿ ಅನಿಸಿಕೆ ವ್ಯಕ್ತ ಪಡಿಸಿ ಫೌಂಡೇಶನ್ ಗೆ ಕೃತಜ್ಞತೆ ಸಲ್ಲಿಸಿದರು.