Friday, April 12, 2024

ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ದ. ಕ. ಜಿಲ್ಲೆಯ 17 ಗ್ರಾ.ಪಂ. ಸೀಲ್ಡೌನ್

ಮಂಗಳೂರು, ಜೂ.13: ಕೋವಿಡ್ ಸೋಕಿನ ಪ್ರಮಾಣ ಈ ದಿನಕ್ಕೆ ಅನ್ವಯ ವಾಗುವಂತೆ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು  ಜೂ.14ರಿಂದ ಬೆಳಗ್ಗೆ 9 ಗಂಟೆಯಿಂದ 21ರ ಬೆಳಗ್ಗೆ 9 ಗಂಟೆಯವರೆಗೆ ಸೀಲ್ಡೌನ್ ಮಾಡಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ದ.ಕ.ಜಿಪಂ ಸಿಇಒ ಅವರ ವರದಿ ಆಧರಿಸಿ 50ಕ್ಕಿಂತ ಅಧಿಕ ಕೋವಿಡ್ ಸಕ್ರಿಯ ಪ್ರಕರಣಗಳು ಇರುವ ಗ್ರಾಪಂಗಳನ್ನು ಸೀಲ್ಡೌನ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ ಮಂಗಳೂರು ತಾಲೂಕಿನ ಕೊಣಾಜೆ ಮತ್ತು ನೀರುಮಾರ್ಗ, ಬೆಳ್ತಂಗಡಿ ತಾಲೂಕಿನ ನಾರಾವಿ, ಕೊಯ್ಯೂರು, ಮಿತ್ತಬಾಗಿಲು, ಮಾಲಾಡಿ, ನೆರಿಯ, ಲಾಯಿಲ, ಉಜಿರೆ ಮತ್ತು ಚಾರ್ಮಾಡಿ ಮುಂದಿನ ಒಂದು ವಾರಗಳ ಕಾಲ ಸೀಲ್ ಡೌನ್ ಆಗಲಿವೆ. ಅದಲ್ಲದೆ ಸುಳ್ಯ ತಾಲೂಕಿನ ಐವರ್ನಾಡು, ಅಮರ ಮುಡ್ನೂರು, ಕೊಲ್ಲಮೊಗರು, ಗುತ್ತಿಗಾರು, ಅರಂತೋಡು, ಕಡಬ ತಾಲೂಕಿನ ಸುಬ್ರಮಣ್ಯ ಹಾಗೂ ಸವಣೂರು ಸಹಿತ 17 ಗ್ರಾಪಂಗಳು ಸೀಲ್‌ಡೌನ್ ಆಗಲಿದೆ.

ಈ 17 ಗ್ರಾಪಂಗಳಿಗೆ ಹೊರಗಿನಿಂದ ಬರುವವರು ಮತ್ತು ಅಲ್ಲಿಂದ ಹೊರಗೆ ಹೋಗುವವರಿಗೆ ಕೆಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಅಲ್ಲದೆ ನರ್ಸಿಂಗ್ ಹೋಂ, ಕ್ಲಿನಿಕ್, ಲ್ಯಾಬ್, ಟಲಿಮೆಡಿಸಿನ್, ರಕ್ತ ಸಂಗ್ರಹ ಕೇಂದ್ರ ಇತ್ಯಾದಿ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಕೆಎಂಎಫ್ ಹಾಲಿನ ಬೂತ್ ಮತ್ತು ರಾಜ್ಯ, ರಾಷ್ಟ್ರ ಹೆದ್ದಾರಿ ಪಕ್ಕದ ಪೆಟ್ರೋಲ್ ಬಂಕ್‌ಗಳನ್ನು ತೆರೆಯಬಹುದು.

More from the blog

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ ವಾರ್ಷಿಕ ಜಾತ್ರೆ..ಮಹಾರಥೋತ್ಸವ ಕಣ್ಣುಂಬಿಕೊಂಡ ಸಾವಿರಾರು ಭಕ್ತರು

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಎ. ೧೧ರಂದು ಸಂಜೆ ರಥೋತ್ಸವ ನಡೆಯಿತು. ಜಾತ್ರೆಯಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಮಹಾಪೂಜೆಯ ಬಳಿಕ ದೇವರು ರಥಾರೋಹಣಗೊಂಡು ಸಾಂಕೇತಿಕವಾಗಿ ರಥವನ್ನು ಎಳೆಯಲಾಯಿತು. ಮಧ್ಯಾಹ್ನ ರಥಕ್ಕೆ...

ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ"ದ ಅಂಗವಾಗಿ ಬಂಟ್ವಾಳದ ಬಡಗಕಜೆಕಾರು, ತೆಂಕಕಜೆಕಾರು ಗ್ರಾಮದಲ್ಲಿ ಮತದಾರರ ಮನೆಗೆ...

ಲೋಕಸಭಾ ಚುನಾವಣೆಯ ಹಿನ್ನೆಲೆ : ಚಾರ್ಮಾಡಿಯ ಮೂವರು ಗಡಿಪಾರು

ಬೆಳ್ತಂಗಡಿ: ಚುನಾವಣ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಹಾಗೂ ಕೋಮು ಗಲಭೆಗಳಲ್ಲಿ ಭಾಗವಹಿಸುವ ಸಾಧ್ಯತೆ ಇರುವ ಕಾರಣ ಮೂವರು ರೌಡಿಶೀಟರ್‌ಗಳನ್ನು ಧರ್ಮಸ್ಥಳ ಪೊಲೀಸರು ಗಡಿಪಾರು ಮಾಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿಗಳಾದ...

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...