ಬಂಟ್ವಾಳ: ಯುವ ಕಾಂಗ್ರೆಸ್ ಪಾಣೆಮಂಗಳೂರು ಬ್ಲಾಕ್ ಇವರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಮೆಲ್ಕಾರ್ ನಲ್ಲಿವ ರಕ್ತದಾನ ಶಿಬಿರ ನಡೆಯಿತು.
ಮಾಜಿ ಸಚಿವ ಬಿ. ರಮಾನಾಥ ರೈ ಯವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಯೋಜಕರಾದ ಪ್ರವೀಣ್,ಮಂಗಳೂರು ಬ್ಲಡ್ ಡೋನರ್ಸ್ ಸಂಸ್ಥೆಯ ಅಧ್ಯಕ್ಷರಾದ ಸಿದ್ಧಿಕ್ ಮಂಜೇಶ್ವರ,ಜಿಲ್ಲಾ ಪಂಚಾಯತ್ ಸದಸ್ಯರುಗಳಾದ ಚಂದ್ರಪ್ರಕಾಶ್ ಶೆಟ್ಟಿ, ಎಮ್ ಎಸ್ ಮೊಹಮ್ಮದ್,ಪದ್ಮಶೇಖರ್ ಜೈನ್,ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ, ತಾಲೂಕು ಪಂಚಾಯತ್ ಸದಸ್ಯರಾದ ಸಂಜೀವ ಪೂಜಾರಿ, ಎಪಿಎಂಸಿ ಮಾಜಿ ಅಧ್ಯಕ್ಷರಾದ ಪದ್ಮನಾಭ ರೈ, ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಬೇಬಿ ಕುಂದರ್,ದ. ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ,ಬಂಟ್ವಾಳ ಪುರಸಭಾ ಅಧ್ಯಕ್ಷರಾದ ಮೊಹಮ್ಮದ್ ಶರೀಫ್,ಪುರಸಭಾ ಉಪಾಧ್ಯಕ್ಷರಾದ ಶ್ರೀಮತಿ ಜೇಸಿಂತ ಡಿ’ಸೋಜ, ಪುರಸಭಾ ಸದಸ್ಯರಾದ ಸಿದ್ಧಿಕ್ ಗುಡ್ಡೆಯಂಗಡಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಜಿಲ್ಲಾ ಇಂಟೆಕ್ ಕಾರ್ಯದರ್ಶಿಗಳಾದ ಚಿತ್ತರಂಜನ್ ಶೆಟ್ಟಿ ಬೊಂಡಾಲ,ಚಂದ್ರಶೇಖರ್ ಕೊರ್ಯಾ ಮೊದಲಾದವರು ಉಪಸ್ಥಿತರಿದ್ದರು.
ಈ ರಕ್ತದಾನ ಶಿಬಿರದಲ್ಲಿ 109 ಯೂನಿಟ್ ರಕ್ತ ಸಂಗ್ರಹಣೆಯಾಗಿದೆ.