ಬಂಟ್ವಾಳ: ರಾಜ್ಯ ಸರಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಒದಗಿಸಿರುವ ಡಿಜಿಟಲ್ ಕಲಿಕಾ ಯೋಜನೆಯಡಿ ಬಂಟ್ವಾಳದ ವಿವಿಧ ಕಾಲೇಜುಗಳಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಹಾಗೂ ಪ್ರಥಮ ಪದವಿಯಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ಪಿಸಿಯನ್ನು ವಿತರಿಸಲಾಯಿತು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಪ್ರಸ್ತಾವನೆಯಂತೆ ಬಂಟ್ವಾಳ ಸರಕಾರಿ ಪಾಲಿಟೆಕ್ನಿಕ್‌ಗೆ 387, ವಾಮದಪದವು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 201, ಸಿದ್ದಕಟ್ಟೆ ಪ್ರಥಮ ದರ್ಜೆ ಕಾಲೇಜಿಗೆ 97, ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 44 ಹಾಗೂ ಕನ್ಯಾನ ಪ್ರಥಮ ದರ್ಜೆ ಕಾಲೇಜಿಗೆ 32 ಟ್ಯಾಬ್ಲೆಟ್ ಪಿಸಿಗಳನ್ನು ಒದಗಿಸಲಾಗಿತ್ತು.
ಆಯಾಯ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷರು ಸೇರಿದಂತೆ ಪ್ರಮುಖರು ಸಾಂಕೇತಿಕವಾಗಿ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿ ಟ್ಯಾಬ್ಲೆಟ್ ಪಿಸಿಗಳನ್ನು ವಿತರಿಸಿದರು.