ನವದೆಹಲಿ: ಕರೊನಾ ನಿಯಂತ್ರಣದಲ್ಲಿ ಲಸಿಕೆಯ ಪಾತ್ರ ಪ್ರಮುಖವಾದದ್ದು ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ, ಇದೀಗ ಲಸಿಕೆ ವಿತರಣೆ ಸಂಬಂಧ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಲಸಿಕೆ ವಿರುದ್ಧ ನಡೆಯುತ್ತಿರುವ ಟೀಕೆಗಳಿಗೆ ಉತ್ತರವನ್ನೂ ಕೊಟ್ಟ ಪ್ರಧಾನಿ, ಜೂ. 21ರ ಬಳಿಕ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುವುದು ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ.
ಈ ಮೊದಲು ಲಸಿಕೆ ವಿತರಣೆ ಸಂಬಂಧ ರಾಜ್ಯಗಳಿಗೆ ಶೇ. 50 ಜವಾಬ್ದಾರಿ ವಹಿಸಲಾಗಿತ್ತು. ಆದರೆ ಲಸಿಕೆ ವಿತರಣೆ ಕುರಿತು ಒಂದಷ್ಟು ಟೀಕೆಗಳು ವ್ಯಕ್ತವಾದ್ದರಿಂದ ಲಸಿಕೆ ವಿತರಣೆಯ ಪೂರ್ತಿ ಜವಾಬ್ದಾರಿಯನ್ನು ಕೇಂದ್ರ ಸರ್ಕಾರವೇ ಹೊರಲಿದ್ದು, ಇನ್ನೆರಡು ವಾರದಲ್ಲಿ ಆ ಕುರಿತು ಹೊಸ ಮಾರ್ಗಸೂಚಿಯನ್ನು ಹೊರಡಿಸಲಾಗುವುದು ಎಂದರು.
ಆರಂಭಿಕ ಹಂತದಲ್ಲಿ ಕೊರೊನಾ ವಾರಿಯರ್ಸ್ ಗಳಿಗೆ ಲಸಿಕೆ ನೀಡಿದ ಪರಿಣಾಮ ದೇಶದ ಜನರ ಆರೋಗ್ಯ ಸೇವೆ ಮಾಡಲು ಸಾಧ್ಯವಾಯಿತು.
ಖಾಸಗಿ ಆಸ್ಪತ್ರೆಗಳಿಗೆ ಶೇ.25 ರಷ್ಟು ಲಸಿಕೆ ನೀಡಲಾಗುತ್ತದೆ.ಖಾಸಗಿ ಆಸ್ಪತ್ರೆಗಳು ಕೇವಲ 150 ರೂ ಸೇವಾ ಸುಲ್ಕ ಮಾತ್ರ ಪಡೆದು ಜನರಿಗೆ ಲಸಿಕೆ ನೀಡಬೇಕು ಎಂಬುದನ್ನು ಕೂಡ ಸ್ಪಷ್ಟವಾಗಿ ತಿಳಿಸಿದರು.