ಬಂಟ್ವಾಳ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ದ.ಕ.ಉಡುಪಿ ಜಿಲ್ಲಾ ಬಂಟ್ಚಾಳ ವಲಯದ ಸದಸ್ಯರಿಗೆ ಬಿಸಿರೋಡಿನ ಹೋಟೆಲ್ ರಂಗೋಲಿ ಯಲ್ಲಿ ಏರ್ಪಡಿಸಿದ್ದ ಕೋವಿಡ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಬೇಟಿ ನೀಡಿದರು.
ಕೋವಿಡ್ ನಿಯಂತ್ರಣ ಸಾಧಿಸವಾಗಬೇಕಾದರೆ ಪ್ರತಿಯೊಬ್ಬರಿಗೆ ವ್ಯಾಕ್ಸಿನೇಷನ್ ಆಗಬೇಕು.
ಈ ನಿಟ್ಟಿನಲ್ಲಿ ಹಂತಹಂತವಾಗಿ ಪ್ರತಿಯೊಬ್ಬರಿಗೂ ಲಸಿಕೆ ನೀಡುವ ಕೆಲಸ ಆರೋಗ್ಯ ಇಲಾಖೆಯಿಂದ ಆಗುತ್ತಿದೆ.
ಯಾವುದೇ ಗೊಂದಲ ಬೇಡ , ಲಸಿಕೆ ಲಭ್ಯವಿರುವ ಸಮಯದಲ್ಲಿ ಪ್ರತಿಯೊಬ್ಬ ಪ್ರಜೆಯೂ ಲಸಿಕೆ ಪಡೆದು ಕೋವಿಡ್ ನಿಯಂತ್ರಣ ಕ್ಕಾಗಿ ಸಹಕಾರ ನೀಡಿ ಎಂದು ಅವರು ಹೇಳಿದರು.
ಈಸಂದರ್ಭದಲ್ಲಿ ಎಸ್.ಕೆ.ಪಿ.ಎ.ಅಧ್ಯಕ್ಷ ಕುಮಾರ ಸ್ವಾಮಿ, ಉಪಾಧ್ಯಕ್ಷ ರೋಶನ್, ಕಾರ್ಯದರ್ಶಿ ವಿಕೇಶ್ ಬಂಟ್ವಾಳ, ಜತೆ ಕಾರ್ಯದರ್ಶಿ ಮಹೇಶ್ ಶೆಟ್ಟಿ,
ಮಾಜಿ ಜಿಲ್ಲಾ ಕಾರ್ಯದರ್ಶಿ ದಯಾನಂದ ಬಂಟ್ವಾಳ ಮತ್ತಿತರರು ಉಪಸ್ಥಿತರಿದ್ದರು.