Saturday, April 6, 2024

ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಶಾಲೆ – ಕಾಲೇಜುಗಳು ಪುನರಾರಂಭ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುತ್ತಿರುವ ಬೆನ್ನಲ್ಲೇ ಸರ್ಕಾರ, ಶಾಲಾ – ಕಾಲೇಜುಗಳ ಆರಂಭಕ್ಕೆ ಸಿದ್ಧತೆ ನಡೆಸಿದೆ. ಆದರೆ ಲಸಿಕೆ ಪಡೆಯದೇ ಶಾಲೆಗಳಿಗೆ ಹೋಗುವ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ಆರಂಭವಾಗಿದ್ದು, ಗೊಂದಲಗಳಿಗೆ ಆರೋಗ್ಯ ಸಚಿವ ಡಾ. ಸುಧಾಕರ್ ತೆರೆ ಎಳೆದಿದ್ದಾರೆ.

ವಿದ್ಯಾರ್ಥಿಗಳಿಗೆ ಲಸಿಕೆ ನೀಡಿದ ಬಳಿಕವೇ ಶಾಲೆ – ಕಾಲೇಜುಗಳು ಪುನರಾರಂಭವಾಗಲಿವೆ. ಈ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಯಾವುದೇ ಭಯ, ಆತಂಕ ಬೇಡ ಎಂದು ಸ್ಪಷ್ಟಪಡಿಸಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಸಲಹೆಯಂತೆ ಲಸಿಕೆ ಕೊಟ್ಟ ಬಳಿಕ ಶಾಲೆ, ಕಾಲೇಜುಗಳನ್ನು ಆರಂಭಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...