ಪಂಜಿಕಲ್ಲುಗ್ರಾಮ ಪಂಚಾಯತ್ ಅಧ್ಯಕ್ಷರ ಕೋರಿಕೆಯ ಮೇರೆಗೆ ವಾಮದಪದವು ಸೇವಾ ಸಹಕಾರಿ ಬ್ಯಾಂಕ್ ವತಿಯಿಂದ ಪಂಜಿಕಲ್ಲು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಟ್ಯಾಬ್ ಸ್ಯಾನಿಟೈಸರ್ ಹಾಗೂ ಮಾಸ್ಕ್ ವಿತರಿಸಲಾಯಿತು. ಕೋವಿಡ್ ಲಸಿಕಾ ನೋಂದಣಿ ಕಾರ್ಯವನ್ನು ಕ್ಷಿಪ್ರ ವಾಗಿ ನಡೆಸುವ ಮೂಲಕ ಜನರಿಗೆ ಉಂಟಾಗುವ ತೊಂದರೆಯನ್ನು ತಪ್ಪಿಸಲು ಟ್ಯಾಬ್ ವ್ಯವಸ್ಥೆಯನ್ನು ಮಾಡಿಕೊಡುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಪಂಜಿಕಲ್ಲು ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಕೋರಿದ್ದರು. ತುರ್ತು ಅವಶ್ಯಕತೆಯನ್ನು ಮನಗಂಡು ಪಂಚಾಯತ್ ಆಡಳಿತದ ಕೋರಿಕೆಗೆ ಸ್ಪಂದಿಸಿದ ವಾಮದಪದವು ಸೇವಾ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರು, ಉಪಾಧ್ಯಕ್ಷರು , ನಿರ್ದೇಶಕರು ಹಾಗೂ ಪ್ರಬಂಧಕರಿಗೆ ಹಾಗೂ ಗ್ರಾಮ ಪಂಚಾಯತ್ ಆಡಳಿತಕ್ಕೆ ವೈದ್ಯರಾದ ಸತೀಶ್ ಕುಮಾರ್ ಧನ್ಯವಾದಗಳನ್ನು ಅರ್ಪಿಸಿದರು. ಕಾರ್ಯಕ್ರಮದಲ್ಲಿ ಪಂಜಿಕಲ್ಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಜೀವ ಪೂಜಾರಿ ಪಿಲಿಂಗಾಲ್, ವಾಮದಪದವು ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಕಮಲ್ ಶೆಟ್ಟಿ, ಗ್ರಾಮ ಪಂಚಾಯತ್ ಸದಸ್ಯರಾದ ಲಕ್ಷ್ಮೀನಾರಾಯಣ ಗೌಡ, ಮೋಹನ್ ದಾಸ್, ಪೂವಪ್ಪ ಮೆಂಡನ್, ಬಾಲಕೃಷ್ಞ ಪೂಜಾರಿ, ವಿಕೇಶ್, ಸೇವಾ ಸಹಕಾರಿ ಬ್ಯಾಂಕ್ ನ ನಿರ್ದೇಶಕರು, ಪ್ರಬಂಧಕರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ, ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು.