Saturday, April 6, 2024

ಜಿಲ್ಲೆಯ ಮೊದಲ ಆಕ್ಸಿಜನ್ ಘಟಕ ವಾಮದಪದವಿನಲ್ಲಿ ಲೋಕಾರ್ಪಣೆ. ಕೊರೊನಾ ವಿರುದ್ಧದ ಹೋರಾಟಕ್ಕೆ ಆಕ್ಸಿಜನ್ ಘಟಕಗಳು ಪೂರಕ: ಸಚಿವ ಕೋಟ

ಬಂಟ್ವಾಳ : ದಕ್ಷಿಣಕನ್ನಡ ಜಿಲ್ಲೆಯ ಪ್ರಥಮ ಆಕ್ಸಿಜನ್ ಉತ್ಪಾದನಾ ಘಟಕ‌ ವಾಮದಪದವು ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ಶನಿವಾರ ಉದ್ಘಾಟನೆ ಗೊಂಡಿತು. ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಘಟಕವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಜಿಲ್ಲೆಯಲ್ಲಿ ಕೊರೋನಾ ನಿಗ್ರಹಕ್ಕೆ ಪೂರಕವಾಗಿ ಆಕ್ಸಿಜನ್ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಸ್ಥಾಪನೆಯಾದ ಪ್ರಥಮ ಆಕ್ಸಿಜನ್ ಘಟಕ ಇದಾಗಿದೆ ಎಂದರು. ಬಂಟ್ವಾಳದಲ್ಲಿ ಕೊರೋನಾ ವಿರುದ್ಧ ಹೋರಾಟ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಸಂಸದರಾದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಹಾಗೂ ಅಧಿಕಾರಿ ವೃಂದದ ಶ್ರಮವನ್ನು ಅವರು ಶ್ಲಾಘಿಸಿದರು. ಈ ಘಟಕದಲ್ಲಿ ಪ್ರತಿ ನಿಮಿಷಕ್ಕೆ 46 ಲೀಟರ್ ಆಕ್ಸಿಜನ್ ಉತ್ಪಾದನಾ ಸಾಮರ್ಥ್ಯ ಹೊಂದಿದ್ದು, ಜಿಲ್ಲೆಯ ವಿವಿಧೆಡೆಗಳಲ್ಲಿಯೂ ಹಂತಹಂತವಾಗಿ ಆಕ್ಸಿಜನ್ ಘಟಕ ಸ್ಥಾಪನೆಯಾಗಲಿದೆ ಎಂದವರು ಹೇಳಿದರು.

ಈ ಸಂದರ್ಭದಲ್ಲಿ ಎ.ಸಿ.ಮದನ್ ಮೋಹನ್,

ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿ.ಪ. ಸದಸ್ಯ ಎಂ.ತುಂಗಪ್ಪ ಬಂಗೇರ, ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ಸದಸ್ಯೆ ಸುಲೋ ಜಿ.ಕೆ.ಭಟ್, ತಾ.ಪಂ.ಸದಸ್ಯ ಪ್ರಭಾಕರ ಪ್ರಭು, ಚೆನ್ನೈತ್ತೋಡಿ ಗ್ರಾ.ಪಂ.ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಕುಕ್ಕಿಪಾಡಿ ಅಧ್ಯಕ್ಷೆ ಸುಜಾತ ಆರ್ ಪೂಜಾರಿ, ಉಪಾಧ್ಯಕ್ಷ ಯೋಗೀಶ್ ಆಚಾರ್ಯ,

ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ, ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ತಹಶಿಲ್ದಾರ್ ರಶ್ಮಿ. ಎಸ್. ಆರ್, ಡಾ! ಉಮೇಶ್ ಅಡ್ಯಾಂತಾಯ, ಇಂಜಿನಿಯರ್ ಕೃಷ್ಣ, ತಾಲೂಕು ಪ್ರಭಾರ ಆರೋಗ್ಯ ಅಧಿಕಾರಿ ಜಯಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.

 

 *ಕೋವಿಡ್ ಕೇರ್ ಸೆಂಟರ್ ಗೆ ಬೇಟಿ*

ವಾಮದಪದವು ಹಿಂದುಳಿದ ವರ್ಗಗಳ ಬಾಲಕಿಯರ ಹಾಸ್ಟೆಲ್ ನಲ್ಲಿರುವ ಕೋವಿಡ್ ಕೇರ್ ಸೆಂಟರ್ ಗೆ ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಶಾಸಕ ರಾಜೇಶ್ ನಾಯ್ಕ್ , ಎ.ಸಿ.ಮದನ್ ಮೋಹನ್, ತಹಶಿಲ್ದಾರ್ ರಶ್ಮಿ. ಎಸ್.ಆರ್.ಬೇಟಿ ನೀಡಿ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಬಿಂದಿಯಾ ನಾಯಕ್ ಅವರಲ್ಲಿ ಮಾಹಿತಿ ಪಡೆದ ರು.

More from the blog

ನೀತಿ ಸಂಹಿತೆ ಉಲ್ಲಂಘನೆ : ಕೋಟಾ ಶ್ರೀನಿವಾಸ್‌ ಪೂಜಾರಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಅವರಿಗೆ ಕೋರ್ಟ್‌ ಸಮನ್ಸ್‌ ಜಾರಿ ಮಾಡಿದೆ. ಕೋಟಾ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ...

ಸರ್ಕಾರದ ಕೋವಿ ಠೇವಣಿ ಕ್ರಮ: ಪರವಾನಿಗೆ ಪಡೆದ ರೈತರಿಂದ ಚುನಾವಣೆ ಬಹಿಷ್ಕಾರ 

ವಿಟ್ಲ: ಕರ್ನಾಟಕ ರಾಜ್ಯ ರೈತ ಸಂಘ ಹಸಿರುಸೇನೆಯ ದ.ಕ.ಜಿಲ್ಲಾ ಸಮಿತಿ ಮತ್ತು ಕೋವಿ ಪರವಾನಿಗೆ ಪಡೆದ ರೈತ ಬಳಕೆದಾರರ ಸಂಘವು ಈ ಬಾರಿ ಚುನಾವಣೆ ಬಹಿಷ್ಕರಿಸುತ್ತದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶ್ರೀಧರ...

ಟ್ರಾಫಿಕ್ ಪೊಲೀಸ್ ಠಾಣೆಯ ಕಾಮಗಾರಿಯನ್ನು ಪೊಲೀಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ

ಬಂಟ್ವಾಳ; ಬಿಸಿರೋಡಿನ ಪಾಣೆಮಂಗಳೂರಿನಲ್ಲಿ ಅಂದಾಜು ರೂ.3.18 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟ್ರಾಫಿಕ್ ಪೋಲೀಸ್ ಠಾಣೆಯ ಕಾಮಗಾರಿಯನ್ನು ಪೋಲಿಸ್ ಹೌಸಿಂಗ್ ಕಾರ್ಪೋರೇಸನ್ ಎಡಿಜಿಪಿ ರಾಮಚಂದ್ರರಾವ್ ವೀಕ್ಷಣೆ ನಡೆಸಿದರು. ಉತ್ತಮ ಗುಣಮಟ್ಟದಲ್ಲಿ ಠಾಣೆಯ ಕೆಲಸವನ್ನು ಮಾಡುವ...

ಸೌಜನ್ಯ ಹೋರಾಟ ಸಮಿತಿಯಿಂದ ನೋಟ ಅಭಿಯಾನ

ಮಂಗಳೂರು: ರಾಜಕೀಯ ಪಕ್ಷಗಳು ಮತ್ತು ನ್ಯಾಯಾಂಗ ವ್ಯವಸ್ಥೆಯ ಗಮನ ಸೆಳೆಯುವ ಉದ್ದೇಶದಿಂದ ಸೌಜನ್ಯ ಪರ ಹೋರಾಟ ಸಮಿತಿ ವತಿಯಿಂದ ಮುಂಬರುವ‌ ಲೋಕಸಭಾ ಚುನಾವಣೆಯಲ್ಲಿ ನೋಟಕ್ಕೆ ಮತ ಚಲಾಯಿಸಲು ಜನ ಸಾಮಾನ್ಯರನ್ನು ಪ್ರೇರೇಪಿಸಲು ನೋಟ...