ಬಂಟ್ವಾಳ: ವಸತಿ ಸಚಿವ ವಿ. ಸೋಮಣ್ಣ ರವರನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಬೇಟಿ ಮಾಡಿ ಕ್ಷೇತ್ರದಲ್ಲಿ ವಿವಿಧವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳ ಅನುದಾನ ಬಿಡುಗಡೆಯ ಬಗ್ಗೆ ಚರ್ಚಿಸಿದರು.
ಕ್ಷೇತ್ರದ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ತಲಾ 20 ಮನೆಗಳು ಮತ್ತು ಹೆಚ್ಚುವರಿಯಾಗಿ ಬಂಟ್ವಾಳ ಕ್ಷೇತ್ರಕ್ಕೆ ಮಂಜೂರು ಮಾಡಲಾದ 1333 ಮನೆಗಳ ಬಗ್ಗೆಯೂ ಈ ಸಂಧರ್ಭದಲ್ಲಿ ಮಾತುಕತೆ ನಡೆಸಿದರು. ಅನುದಾನ ಬಿಡುಗಡೆ ಬಗ್ಗೆ ಕೂಡಲೇ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಈ ಸಂಧರ್ಭದಲ್ಲಿ ಬಂಟ್ವಾಳ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ ಹಾಗೂ ಬೂಡ ಅಧ್ಯಕ್ಷ ದೇವದಾಸ್ ಶೆಟ್ಟಿ ಉಪಸ್ಥಿತರಿದ್ದರು.