ಕೋವಿಡ್-19 ಎರಡನೇ ಅಲೆಯ ಕಠಿಣ ಸಂದರ್ಭದಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂದಿರಾ ಕ್ಷೇಮ ನಿಧಿಯ ವತಿಯಿಂದ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ರೈ ಯವರ ಮುಂದಾಳತ್ವದಲ್ಲಿ ವೀರಕಂಭ ಗ್ರಾಮದಲ್ಲಿ ಕೋವಿಡ್ ಪಾಸಿಟಿವ್ ಇರುವ 47 ಮನೆಗಳಿಗೆ ಆಹಾರ ಸಾಮಗ್ರಿಗಳ ಕಿಟ್ ಗಳನ್ನು ನೀಡುವ ವಿಶೇಷ ಕಾರ್ಯಕ್ರಮ ವೀರಕಂಭ ಗ್ರಾಮದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ,ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಅಬ್ಬಾಸ್ ಅಲಿ,ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ,ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಬಡಕಬೈಲು,ವಲಯ ಕಾಂಗ್ರೆಸ್ ಅಧ್ಯಕ್ಷರಾದ ಕೃಷ್ಣಪ್ಪ ಪೂಜಾರಿ, ಗ್ರಾಮ ಪಂಚಾಯತ್ ಉಸ್ತುವಾರಿ ಗಣೇಶ್ ಶೆಟ್ಟಿ ಗೋಳ್ತಮಜಲು, ಗ್ರಾಮ ಪಂಚಾಯತ್ ಸದಸ್ಯರುಗಳಾದ ರಘು ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ವಸಂತ್ ಪೂಜಾರಿ, ದೇವದಾಸ್ ರೈ, ರಾಮಚಂದ್ರ ಪ್ರಭು,ಪ್ರಮುಖರಾದ ಸತೀಶ್ ಬಾಯಿಲ, ಸೆರೀಫ್ ಪರಕಜೆ,ವಿ ಕೆ ಇಸ್ಮಾಯಿಲ್ ಮೊದಲಾದವರು ಉಪಸ್ಥಿತರಿದ್ದರು.