ವಿಟ್ಲ: ವಿಟ್ಲ ಠಾಣಾ ಎಸ್. ಐ ವಿನೋದ್ ಎಸ್. ರೆಡ್ಡಿಯವರನ್ನು ಉತ್ತರಕನ್ನಡ ಜಿಲ್ಲೆಯ ಕಾಮತ್ತೂಸು, ರಾಮನಗರ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ ರವರು ಆದೇಶ ಹೊರಡಿಸಿದ್ದಾರೆ.
೨೦೧೭ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ವಿನೋದ್ ಎಸ್. ರೆಡ್ಡಿಯವರು ಆ ಬಳಿಕ ಮಂಗಳೂರು ಕೇಂದ್ರ ಸ್ಥಾನದಲ್ಲಿ ಪ್ರೊಬೆಷನರಿ ಎಸ್.ಐ. ಆಗಿ ಕರ್ತವ್ಯ ಆರಂಭಿಸಿದರು. ಬಳಿಕ ಉಡುಪಿ ಜೆಲ್ಲೆಯ ಹೆಜಮಾಡಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿ 2019ರಲ್ಲಿ ಬಂಟ್ವಾಳ ಗ್ರಾಮಾಂತರ ಠಾಣೆಗೆ ಪ್ರೊಬೆಷನರಿ ಎಸ್.ಐ ಆಗಿ ವರ್ಗಾವಣೆಗೊಂಡು ಬಂದಿದ್ದರು. ವಿಟ್ಲ ಠಾಣಾ ಎಸ್ ಐ ಆಗಿದ್ದ ಯಲ್ಲಪ್ಪರವರ ವರ್ಗಾವಣೆಗೊಂಡ ಬಳಿಕ ವಿನೋದ್ ಎಸ್. ರೆಡ್ಡಿರವರನ್ನು ವಿಟ್ಲ ಠಾಣೆಗೆ ವರ್ಗಾವಣೆ ಮಾಡಲಾಗಿತ್ತು. ವಿನೋದ್ ಎಸ್. ರೆಡ್ಡಿ ರವರು ಮೂಲತಃ ಬಾಗಲಕೋಟೆಯವರಾಗಿದ್ದು ಮೆಕ್ಯಾನಿಕಲ್ ಇಂಜಿನಿಯರ್ ಆಗಿದ್ದಾರೆ. ಇತ್ತೀಚೆಗಷ್ಟೇ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.