Wednesday, April 10, 2024

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಸರಪಾಡಿ ಘಟಕ ಯಕ್ಷಗಾನ ಕಲಾವಿದರು- ಮೇಳದ ಸಿಬಂದಿಗೆ ಕಿಟ್ ವಿತರಣೆ

ಬಂಟ್ವಾಳ: ಮಂಗಳೂರು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ವತಿಯಿಂದ ಟ್ರಸ್ಟ್ ಸ್ಥಾಪಕಾಧ್ಯಕ್ಷ, ಯುವ ಭಾಗವತ ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ ನೀಡಲಾದ ಅಶಕ್ತ ಕಲಾವಿದರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮ ರವಿವಾರ ಫೌಂಡೇಶನ್ ನ ಸರಪಾಡಿ ಘಟಕದ ವತಿಯಿಂದ ಅಜಿಲಮೊಗರಿನ ಕೇಸರಿ ಯುವಕ ಮಂಡಲದಲ್ಲಿ ನಡೆಯಿತು.

ಬೂಡಾ ಅಧ್ಯಕ್ಷ ಬಿ.ದೇವದಾಸ್ ಶೆಟ್ಟಿ ಮಾತನಾಡಿ, ಕಲಾವಿದರ ಅಭ್ಯುದಯಕ್ಕಾಗಿಯೇ ಸ್ಥಾಪನೆಗೊಂಡ ಯಕ್ಷಧ್ರುವ ಫೌಂಡೇಶನ್ ಕೊರೊನಾ ಸಂಕಷ್ಟದ ವೇಳೆಯೂ ಎರಡೂ ವರ್ಷಗಳಲ್ಲಿಯೂ ಕಲಾವಿದರಿಗೆ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡುವ ಕಾರ್ಯ ಮಾಡಿದೆ. ಸರಕಾರ‌ ನೆರವು ನೀಡುವ ವೇಳೆ ಟೀಕೆ ಮಾಡದೆ ನಮ್ಮ ತಪ್ಪುಗಳನ್ನು ಸರಿಮಾಡುವ ಕೆಲಸ ಮಾಡಬೇಕಿದೆ ಎಂದರು.

ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ

ಜಗನ್ನಾಥ ಚೌಟ ಬದಿಗುಡ್ಡೆ ಮಾತನಾಡಿ, ಯಕ್ಷಗಾನ ಕಲಾವಿದರು ವಿಶೇಷ ಜ್ಞಾನಭಂಡಾರವನ್ನು ಹೊಂದಿದ್ದರೂ, ಅವರು ಕಷ್ಟದಲ್ಲೇ ಬದುಕು ಸಾಗಿಸುವ ಪರಿಸ್ಥಿತಿ ಇದೆ. ಸಂಘಟನೆಗಳು ಅವರಿಗೆ ಸೂಕ್ತ ಮಾರ್ಗದರ್ಶನ ನೀಡಿ‌ ಬದುಕಿಗೆ ದಾರಿ ತೋರುವ ಕೆಲಸ ಮಾಡಬೇಕಿದ್ದು, ಈ ನಿಟ್ಟಿನಲ್ಲಿ ಯಕ್ಷಧ್ರುವ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಫೌಂಡೇಶನ್ ಸರಪಾಡಿ ಘಟಕದ ಅಧ್ಯಕ್ಷ ಶಶಿಕಾಂತ ಶೆಟ್ಟಿ ಆರುಮುಡಿ, ಮಣಿನಾಲ್ಕೂರು ಗ್ರಾ.ಪಂ.ಸದಸ್ಯ ಪುರುಷೋತ್ತಮ ಪೂಜಾರಿ ಮಜಲು ಮೊದಲಾದವರಿದ್ದರು. ಹಿರಿಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಅವರು ಕಲಾವಿದರ ಪರವಾಗಿ ಟ್ರಸ್ಟಿಗೆ ಕೃತಜ್ಞತೆ ಅರ್ಪಿಸಿದರು.

ಕಾರ್ಯಕ್ರಮದಲ್ಲಿ ಒಟ್ಟು ೨೬ ಮಂದಿ ಅಶಕ್ತ ಕಲಾವಿದರಿಗೆ ದಿನಸಿ ಸಾಮಾಗ್ರಿಗಳ ಕಿಟ್ ವಿತರಿಸಲಾಯಿತು. ಟ್ರಸ್ಟಿನ ಸರಪಾಡಿ ಘಟಕದ ಸಂಚಾಲಕ, ಹಿರಿಯ ಯಕ್ಷಗಾನ ಕಲಾವಿದ ಅಶೋಕ ಶೆಟ್ಟಿ ಸರಪಾಡಿ ಪ್ರಸ್ತಾವನೆಗೈದರು. ಘಟಕದ ಕಾರ್ಯದರ್ಶಿ, ಸರಪಾಡಿ ಗ್ರಾ.ಪಂ.ಸದಸ್ಯ ಎನ್.ಧನಂಜಯ ಶೆಟ್ಟಿ ಸರಪಾಡಿ ಕಾರ್ಯಕ್ರಮ ನಿರ್ವಹಿಸಿದರು. ಗೌರವಾಧ್ಯಕ್ಷ ಡಾ.ಬಾಲಚಂದ್ರ ಶೆಟ್ಟಿ ಮೀಯಾರ್‌ ವಂದಿಸಿದರು.

More from the blog

ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಫಲಿತಾಂಶದೊಂದಿಗೆ ತೇರ್ಗಡೆ

2023-24ನೇ ಸಾಲಿನ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಪಾಣೆಮಂಗಳೂರು, ನರಿಕೊಂಬುವಿನಲ್ಲಿರುವ ಹಿತೈಷಿ ತರಬೇತಿ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಕು.ಕೀರ್ತನ ಶೇ.95.6% ಅಂಕಗಳೊಂದಿಗೆ ಅತ್ಯುತ್ತಮ ಶ್ರೇಣಿಯಲ್ಲಿ ತೇರ್ಗಡೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಕಟನೆಯಲ್ಲಿ ತಿಳಿಸಲಾಗಿದೆ. 2024-25ನೇ...

ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರ ಗೆಲುವಿಗಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರ ಗ್ರಾಮ,ಮನೆ,ಮನ ಅಭಿಯಾನದ ಅಂಗವಾಗಿ ಬಂಟ್ವಾಳದ ಉಳಿ ಗ್ರಾಮದಲ್ಲಿ ಮತದಾರರ ಮನೆಗೆ ಬೇಟಿ ನೀಡಿ...

ವಿಟ್ಲ ಕೇಂದ್ರ ಜುಮಾ ಮಸೀದಿ, ಈದುಲ್ ಫಿತರ್

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಖತೀಬ್ ಮಹಮ್ಮದ್ ನಸೀಹ್ ದಾರಿಮಿ ಉಸ್ತಾದ್ ರವರು ಖುತುಬಾ ಹಾಗೂ ಈದ್ ನಮಾಝ್ ನಿರ್ವಹಿಸಿದರು. ಈದ್ ಸಂಸೇಶ ನೀಡಿದ ಖತೀಬರು "...

ನೋಟ ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ತಾ.ಪಂ.ಸದಸ್ಯ ಪ್ರಭಾಕರ್ ಪ್ರಭು ಒತ್ತಾಯ…

ನೋಟ (NOTA) ಮತದಾನ ಅಭಿಯಾನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ತಾ.ಪಂ‌.ಸದಸ್ಯ ಪ್ರಭಾಕರ್ ಪ್ರಭು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೆಲವೊಂದು ವ್ಯಕ್ತಿಗಳು ಮತ್ತು ಸಂಘಟನೆಗಳು...