Thursday, April 18, 2024

ರಿಕ್ಷಾ ಪಲ್ಟಿಯಾಗಿ ಓರ್ವ ಸಾವು ಇಬ್ಬರು ಗಂಭೀರ

ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಅಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಇಂದು ಬೆಳಿಗ್ಗೆ ನಡೆದಿದೆ.

ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟ ದುರ್ದೈವಿ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾದರೆ , ಅಲ್ಪಸ್ವಲ್ಪ ಗಾಯಗೊಂಡ ಉಳಿದವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಟೋರಿಕ್ಷಾ ವೂ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

More from the blog

ನರಿಕೊಂಬು: ನವಜೀವನ ವ್ಯಾಯಾಮ ಶಾಲೆ: 21ರಂದು ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ಇಲ್ಲಿನ ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿಮರ್ಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ...

ಹಿಂದೂ ಸಂಘಟನೆ ಮುಖಂಡನಿಗೆ ಚೂರಿ ಇರಿದ ಪ್ರಕರಣ : ಆರೋಪಿ ಅರೆಸ್ಟ್

ಬಂಟ್ವಾಳ: ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಚೂರಿ ಇರಿದು ಪರಾರಿಯಾಗಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣೆಯ ಪೋಲೀಸರು ಬಂಧಿಸಿದ ಘಟನೆ ಇಂದು ನಡೆದಿದೆ. ಬಂಟ್ವಾಳ ನಿವಾಸಿ ರವಿ ಯಾನೆ ರವೀಂದ್ರ ಬಂಧಿತ ಆರೋಪಿಯಾಗಿದ್ದಾನೆ. ಎ.14 ರಂದು ಆದಿತ್ಯವಾರ...

ಬಂಟ್ವಾಳ: ಕರ್ಪೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಶಾಸಕ ರಾಜೇಶ್ ನಾಯ್ಕ್

ಲೋಕಸಭಾ ಚುನಾವಣೆಯಲ್ಲಿ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಬಹುಮತದಿಂದ ಗೆಲ್ಲಿಸಿಕೊಡುವಂತೆ "ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹಾಗೂ ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಗ್ರಾಮ,ಮನೆ,ಮನ ಸಂಪರ್ಕ ಅಭಿಯಾನ" ಕಾರ್ಯಕ್ರಮದ ಮೂಲಕ ಬಂಟ್ವಾಳದ...

ವೈದ್ಯರ ಎಡವಟ್ಟು : ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ

ಮಂಗಳೂರಿನ ಹೆಸರಾಂತ ಮನೋರೋಗ ತಜ್ಞರೊಬ್ಬರು ಕುಡಿದ ಮತ್ತಿನಲ್ಲಿ ರೈಲ್ವೆ ಗೇಟ್ ಗೆ ಡಿಕ್ಕಿ ಹೊಡೆದು ಆವಾಂತರ ಸೃಷ್ಟಿಸಿದ ಘಟನೆ ನಗರ ಹೊರ ವಲಯದ ಪರಂಗಿಪೇಟೆ ಬಳಿಯ ಅರ್ಕುಳ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಕುಡಿದ...